ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯ ಪ್ರದೇಶ: ಸ್ಥಳೀಯ ಬಿಜೆಪಿ ನಾಯಕ ಹೃದಯಾಘಾತದಿಂದ ನಿಧನ

Published 9 ಮೇ 2024, 15:16 IST
Last Updated 9 ಮೇ 2024, 15:16 IST
ಅಕ್ಷರ ಗಾತ್ರ

ಇಂದೋರ್‌: ಮಧ್ಯ ಪ್ರದೇಶದ ಬಿಜೆಪಿ ಘಟಕದ ವಕ್ತಾರ ಗೋವಿಂದ್ ಮಾಲೂ (67) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಿಂದ್‌ ಅವರಿಗೆ ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು ಮತ್ತು ಮಗಳು ಇದ್ದಾರೆ. 

ಭೋಪಾಲ್‌ನಿಂದ ಮನೆಗೆ ಮರಳಿದ ನಂತರ ಬುಧವಾರ ರಾತ್ರಿ ಊಟ ಮಾಡಿದ ಬಳಿಕ ಗೋವಿಂದ್‌ ಅವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ಪಕ್ಷದ ಸ್ಥಳೀಯ ನಾಯಕರು ತಿಳಿಸಿದ್ದಾರೆ. 

ಗೋವಿಂದ್‌ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಈಗಾಗಲೇ ನಿಧನರಾಗಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮಧ್ಯ ಪ್ರದೇಶದ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರು ಗುರುವಾರ ಮುಂಜಾನೆ ಇಂದೋರ್‌ಗೆ ತೆರಳಿ, ಗೋವಿಂದ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. 

ರಾಜಕೀಯಕ್ಕೆ ಬರುವ ಮುನ್ನ ಸ್ಥಳೀಯ ದಿನಪತ್ರಿಕೆಗಳಲ್ಲಿ ಕ್ರೀಡಾ ವಿಮರ್ಶೆ ಬರೆಯುತ್ತಿದ್ದ ಗೋವಿಂದ್‌ ಅವರು, ರಾಜ್ಯ ಬಿಜೆಪಿ ಘಟಕದ ಮಾಧ್ಯಮ ಉಸ್ತುವಾರಿ ಸೇರಿದಂತೆ ಅನೇಕ ಜವಾಬ್ದಾರಿ ನಿರ್ವಹಿಸಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT