ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

RJD ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ನ್ಯಾಯಾಲಯ

Published 6 ಏಪ್ರಿಲ್ 2024, 9:42 IST
Last Updated 6 ಏಪ್ರಿಲ್ 2024, 9:42 IST
ಅಕ್ಷರ ಗಾತ್ರ

ಗ್ವಾಲಿಯರ್: 1995-97ರಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಕ್ರಮವಾಗಿ ಖರೀದಿಸಿದ ಪ್ರಕರಣ ಸಂಬಂಧ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್ (75) ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್‌ನ ವಿಶೇಷ ನ್ಯಾಯಾಲಯವು ಇಂದು (ಶನಿವಾರ) ಬಂಧನ ವಾರಂಟ್ ಹೊರಡಿಸಿದೆ.

ಗ್ವಾಲಿಯರ್‌ನ ಜೆಎಂಎಫ್‌ಸಿ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಮಹೇಂದ್ರ ಸೈನಿ ಅವರು ಲಾಲು ಯಾದವ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಭಿಷೇಕ್ ಮೆಹ್ರೋತ್ರಾ ‘ಪಿಟಿಐ’ಗೆ ತಿಳಿಸಿದ್ದಾರೆ.

1995-97ರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧಿಕೃತ ಡೀಲರ್‌ನಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸಿದ ಪ್ರಕರಣ ಇದಾಗಿದೆ. ಪ್ರಕರಣದಲ್ಲಿ 23 ಆರೋಪಿಗಳಿದ್ದು, ಇಂದರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗೆ ಲಾಲು ಪ್ರಸಾದ್‌ ಯಾದವ್ ಸೇರಿದಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಬಂಧನ ವಾರಂಟ್ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ಬಿಹಾರದ ಮೇವು ಹಗರಣದಲ್ಲಿ ಜೈಲು ಪಾಲಾಗಿದ್ದ ಯಾದವ್, 2021ರ ಏಪ್ರಿಲ್‌ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT