ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಹಳಿ ತಪ್ಪಿದ ಗೂಡ್ಸ್ ರೈಲು

Published 12 ಮೇ 2023, 2:32 IST
Last Updated 12 ಮೇ 2023, 2:32 IST
ಅಕ್ಷರ ಗಾತ್ರ

ಕಟ್ನಿ: ಮಧ್ಯಪ್ರದೇಶದಲ್ಲಿ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು ಹಳಿ ತಪ್ಪಿರುವ ಘಟನೆ ಗುರುವಾರ ನಡೆದಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಕಟ್ನಿ ರೈಲು ನಿಲ್ದಾಣದ ಸಮೀಪದಲ್ಲಿ ಛತ್ತೀಸ್‌ಗಢದಿಂದ ಬರುತ್ತಿದ್ದ ಸಿಮೆಂಟ್ ತುಂಬಿಕೊಂಡಿದ್ದ ಗೂಡ್ಸ್ ರೈಲು ಹಳಿ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಘಟನೆ ನಡೆದಿದ್ದು, ಯಾರಿಗೂ ಗಾಯಗಳಾಗಿಲ್ಲ. ಅಲ್ಲದೆ ಪ್ರಯಾಣಿಕ ರೈಲು ಸಂಚಾರಕ್ಕೂ ಅಡಚಣೆ ಉಂಟಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT