ಇಂಧೋರ್: ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಭೋಪಾಲ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಪಡೆಗಳನ್ನು ಬಳಸಿಕೊಂಡಿದ್ದಾರೆ ಮತ್ತು ರೈತರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಆರೋಪಿಸಿದರು.

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಇಂಧೋರಿನಿಂದ 50 ಕಿ.ಮೀ ದೂರದಲ್ಲಿರುವ ದೆಪಾಲ್‌ಪುರದಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿಯ ನೇತೃತ್ವವನ್ನು ಕಮಲ್ ನಾಥ್ ವಹಿಸಿದ್ದರು. ಕೃಷಿ ಪ್ರಾಬಲ್ಯವಿರುವ ಪ್ರದೇಶದಲ್ಲಿ ಸ್ವತಃ ತಾವೇ ಟ್ರ್ಯಾಕ್ಟರ್ ಓಡಿಸುತ್ತಿರುವುದು ಕಂಡುಬಂತು.

ಶನಿವಾರವಷ್ಟೇ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಕೈಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯಿತು. ಭೋಪಾಲ್‌ನ ರಾಜಭವನಕ್ಕೆ ಘೇರಾವ್ ಹಾಕಲು ತೆರಳುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಇದನ್ನು ಚದುರಿಸಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಬಳಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಈ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್‌ನಾಥ್, 'ಭೋಪಾಲ್‌ನಲ್ಲಿನ ಆಡಳಿತವು ರೈತರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. (ಆಡಳಿತಾರೂಢ) ಭಾರತೀಯ ಜನತಾ ಪಕ್ಷವು ರೈತರು ನಮ್ಮ ದೇಶವು ಅತಿದೊಡ್ಡ ಸಮುದಾಯವನ್ನು ಒಳಗೊಂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿಲ್ಲ'. ಮೂರು ಹೊಸ ಕೃಷಿ ಕಾನೂನುಗಳ ಜಾರಿ ಮೂಲಕ ದೇಶದ ಕೃಷಿ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದರು.

'ಮೂರು ಕರಾಳ ಕಾನೂನುಗಳ ವಿರುದ್ಧ ಲಕ್ಷಾಂತರ ರೈತರು ಹಲವು ದಿನಗಳಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನುಗಳು ನಮ್ಮ ರಾಜ್ಯ ಮತ್ತು ದೇಶದ ಆರ್ಥಿಕತೆಯನ್ನು ಹಾಳುಮಾಡುತ್ತವೆ ಏಕೆಂದರೆ ಅವು ರೈತರ ಖರೀದಿ ಶಕ್ತಿಯನ್ನು ಕಡಿಮೆ ಮಾಡುತ್ತದೆ ಮತ್ತು ಮಾರುಕಟ್ಟೆಗಳು ಕುಸಿಯುವಂತೆ ಮಾಡುತ್ತವೆ' ಎಂದು ದೂರಿದರು.

ಮೊರೆನಾ ಜಿಲ್ಲೆಯಲ್ಲಿ ಇತ್ತೀಚೆಗೆ ಮದ್ಯ ಸೇವಿಸಿದ 24 ಜನರ ಸಾವು, ಮಹಿಳೆಯರ ಮೇಲಿನ ಅಪರಾಧಗಳು ಮತ್ತು ನಿರುದ್ಯೋಗದ ಬಗ್ಗೆ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, 'ಸತ್ಯವನ್ನು ಅರ್ಥಮಾಡಿಕೊಳ್ಳುವ ಮೂಲಕ ಅವರ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸತ್ಯವನ್ನು ಬೆಂಬಲಿಸುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.