ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಜನ ಸಾವು

Last Updated 1 ಆಗಸ್ಟ್ 2022, 11:41 IST
ಅಕ್ಷರ ಗಾತ್ರ

ಭೋಪಾಲ್‌: ಮಧ್ಯಪ್ರದೇಶ ರಾಜ್ಯದ ಜಬಲ್‌ಪುರ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 10 ಜನರ ಮೃತಪಟ್ಟಿದ್ದಾರೆ.

ನ್ಯೂ ಲೈಫ್‌ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ತುರ್ತು ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಅದು ಇಡೀ ಆಸ್ಪತ್ರೆಗೆ ಹರಡಿತು ಎಂದು ಸ್ಥಳೀಯರು ಹೇಳಿದ್ದಾರೆ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದು ಬೆಂಕಿ ನಂದಿಸುವ ಹಾಗೂ ಸ್ಥಳದಲ್ಲಿರುವ ಜನರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

10 ಜನರು ಮೃತಪಟ್ಟಿರುವುದನ್ನು ಪೊಲೀಸರು ಖಚಿತಪಡಿಸಿದ್ದು, ಗಾಯಗೊಂಡವರ ಬಗ್ಗೆ ಅವರು ಮಾಹಿತಿ ನೀಡಿಲ್ಲ.

ಶಾರ್ಟ್ ಸರ್ಕ್ಯೂಟ್ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ತನಿಖೆಗೆ ತಂಡ ರಚನೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಇವುಗಳನ್ನೂ ಓದಿ

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT