ಭೋಪಾಲ್: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ 20 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಇಬ್ಬರು ಸಹ ಪ್ರಯಾಣಿಕರು ಮತ್ತು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದುಪೊಲೀಸರು ಶನಿವಾರ ತಿಳಿಸಿದ್ದಾರೆ.

'ಕಿರುಕುಳಕ್ಕೊಳಗಾದ ಯುವತಿ, ಎಂಪಿ ನಗರದಲ್ಲಿರುವ ಕೋಚಿಂಗ್ ಕ್ಲಾಸ್‌ನಿಂದ ಅಶೋಕ ಗಾರ್ಡನ್‌ನಲ್ಲಿರುವ ತಮ್ಮ ಮನೆಗೆ ತೆರಳಲು ಆಟೋರಿಕ್ಷಾ ಏರಿದ್ದರು' ಎಂದು ಐಷ್‌ಬಾಗ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಮನೀಷ್‌ರಾಜ್ ಸಿಂಗ್ ಭದೋರಿಯಾ ಹೇಳಿದ್ದಾರೆ.

ತಾವು ಆಟೋ ಹತ್ತಿದ ಸಂದರ್ಭದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರಿದ್ದರು. ಆದರೆ, ಅವರಿಬ್ಬರೂ ಇಳಿದುಕೊಂಡ ಬಳಿಕ ಇಬ್ಬರು ಪುರುಷರು ಹತ್ತಿಕೊಂಡರು. ಆಟೋ ಮುಂದಕ್ಕೆ ಸಾಗುತ್ತಿದ್ದಂತೆಯೇ ಅವರು ಕಿರುಕುಳ ನೀಡಲಾರಂಭಿಸಿದರು ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಿಡಿಗೇಡಿಗಳ ಕೃತ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಆಟೋ ನಿಲ್ಲಿಸುವಂತೆ ಚಾಲಕನಿಗೆ ಮನವಿ ಮಾಡಿದೆ. ಆದರೆ, ಆತ (ಚಾಲಕ) ಆಟೋವನ್ನು ಕತ್ತಲ ಪ್ರದೇಶಕ್ಕೆ ತೆಗೆದುಕೊಂಡು ಹೋದ ಎಂದೂ ಆರೋಪಿಸಿದ್ದಾರೆ.

'ಆ ವೇಳೆ ಧೈರ್ಯ ಪ್ರದರ್ಶಿಸಿದ ಯುವತಿ, ರಸ್ತೆ ತಡೆ ಇದ್ದಲ್ಲಿ ಆಟೋ ನಿಧಾನವಾಗಿ ಚಲಿಸುತ್ತಿದ್ದಾಗ ಕೆಳಗೆ ಜಿಗಿದ್ದಿದ್ದಾರೆ' ಎಂದುಭದೋರಿಯಾ ತಿಳಿಸಿದ್ದಾರೆ.ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದೂ ಹೇಳಿರುವ ಅವರು, ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ರಿಕ್ಷಾ ಚಾಲಕ ಮತ್ತು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂತ್ರಸ್ತ ಯುವತಿ ಭೋಪಾಲ್‌ನಲ್ಲಿ ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.