ಚೆನ್ನೈ: ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಧ್ವಜವು ನಮ್ಮ ಟ್ರೇಡ್ಮಾರ್ಕ್ ಮತ್ತು ಹಕ್ಕುಸ್ವಾಮ್ಯ ಉಲ್ಲಂಘಿಸಿದೆ ಎಂದು ಆರೋಪಿಸಿ ಚೆನ್ನೈ ಮೂಲದ ತೊಂಡೈ ಮಂಡಲ ಸಾಂದ್ರೋರ್ ಧರ್ಮ ಪರಿಬಲನ ಸಬೈ ಎನ್ನುವ ಟ್ರಸ್ಟ್, ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು.

ಆ.18ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಏಕಸದಸ್ಯ ಪೀಠವು, ಟಿವಿಕೆ ಪಕ್ಷದ ಧ್ವಜದ ಮೇಲಿನ ನಿರ್ಬಂಧವನ್ನು ತೆರವುಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಟ್ರಸ್ಟ್, ಪ್ರಕರಣದ ವಿಚಾರಣೆ ಮಾಡುವಂತೆ ದ್ವಿಸದಸ್ಯ ಪೀಠಕ್ಕೆ ಮನವಿ ಮಾಡಿತ್ತು.

ಪ್ರಕರಣವನ್ನು ವಿಚಾರಣೆ ಮಾಡಿದ ನ್ಯಾ. ಜಿ. ಜಯಚಂದ್ರನ್ ಮತ್ತು ಎಂ. ಸುಧೀರ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವು, ನಟ ಹಾಗೂ ಟಿವಿಕೆ ಪಕ್ಷದ ನಾಯಕ ವಿಜಯ್ಗೆ ಶುಕ್ರವಾರ ನೋಟಿಸ್ ನೀಡಿದೆ. ಪ್ರಕರಣದ ವಿಚಾರಣೆಯನ್ನು 6 ವಾರಗಳ ಕಾಲ ಮುಂದೂಡಿದೆ.

ಟಿವಿಕೆ ಪಕ್ಷವು ಈ ಧ್ವಜವನ್ನು ಬಳಸದಂತೆ ನಿರ್ಬಂಧಿಸಬೇಕು ಎಂದು ಟ್ರಸ್ಟ್, ನ್ಯಾಯಾಲಯದಲ್ಲಿ ಮನವಿ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.