ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದಲ್ಲಿ ಗೆಹಲೋತ್‌ ಜಾದೂ ಅಂತ್ಯಗೊಂಡಿದೆ: ಗಜೇಂದ್ರ ಸಿಂಗ್‌ ಶೇಖಾವತ್‌

Published 3 ಡಿಸೆಂಬರ್ 2023, 7:27 IST
Last Updated 3 ಡಿಸೆಂಬರ್ 2023, 7:27 IST
ಅಕ್ಷರ ಗಾತ್ರ

ಜೈಪುರ: ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರ ಮಾಂತ್ರಿಕತೆಯಿಂದ ರಾಜಸ್ಥಾನದ ಜನರು ಹೊರಬಂದಿದ್ದಾರೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಟೀಕಿಸಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆಯು ಬಾರಿ ಬಿರುಸಿನಿಂದ ಸಾಗಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ಮಾತನಾಡಿರುವ ಶೇಖಾವತ್‌, ‘ಗೆಹಲೋತ್‌ ಅವರ ಜಾದೂ ಮುಗಿದಿದೆ, ರಾಜಸ್ಥಾನವು ಜಾದೂಗಾರನ ಕಾಟದಿಂದ ಹೊರಬಂದಿದೆ. ಮಹಿಳೆಯರ ಗೌರವ ಮತ್ತು ಬಡವರ ಕಲ್ಯಾಣಕ್ಕಾಗಿ ಜನರು ಬಿಜೆಪಿಗೆ ಮತ ಹಾಕಿದ್ದಾರೆ’ ಎಂದು ಹೇಳಿದ್ದಾರೆ.

‘ಕಾಂಗ್ರೆಸ್‌ ಭರವಸೆಗಳನ್ನು ಜನರು ವಿಫಲಗೊಳಿಸಿದ್ದಾರೆ. ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ಹೊರಹಾಕಲು ಜನರು ಬಿಜೆಪಿಗೆ ಮತ ಹಾಕಿದ್ದಾರೆ. ರಾಜ್ಯದಲ್ಲಿ ಭಾರಿ ಜನಾದೇಶದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ’ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಒಟ್ಟು 199 ಸ್ಥಾನಗಳ ಪೈಕಿ ಬಿಜೆಪಿ 116 ಮತ್ತು ಕಾಂಗ್ರೆಸ್‌ 67 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT