ಔರಂಗಬಾದ್: ಒಬಿಸಿ ಪ್ರವರ್ಗದ ಎರಡು ಸಾವಿರ ವಿದ್ಯಾರ್ಥಿಗಳಿಗೆ, ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ (ಎಂಪಿಎಸ್‌ಸಿ) ಪರೀಕ್ಷೆಗಳಿಗೆ ಮತ್ತು ಒಂದು ಸಾವಿರ ವಿದ್ಯಾರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಗಳಿಗೆ ತರಬೇತಿ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಚಿವ ವಿಜಯ್ ವಡೆಟ್ಟಿವಾರ್ ಶನಿವಾರ ತಿಳಿಸಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘ಪ್ರತಿ ವರ್ಷ 25 ವಿದ್ಯಾರ್ಥಿಗಳಿಗೆ ಪೈಲಟ್ ತರಬೇತಿ ನೀಡುವ ಕುರಿತು ವಿಮಾನಯಾನ ಕಂಪನಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ‘ ಎಂದು ಹೇಳಿದರು.

ರಾಜ್ಯ ಸರ್ಕಾರ ಈಗಾಗಲೇ ‘ಮಹಾಜ್ಯೋತಿ‘ (ಮಹಾತ್ಮ ಜ್ಯೋತಿಬಾ ಫುಲೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ) ಯೋಜನೆಗೆ ₹150 ಕೋಟಿ ಹಣ ಮಂಜೂರು ಮಾಡಿದೆ, ಅದರಲ್ಲಿ ₹40 ಕೋಟಿಗಳನ್ನು ವಿತರಿಸಿದೆ‘ ಎಂದು ಅವರು ಹೇಳಿದರು.

‘ಮಹಾಜ್ಯೋತಿ‘ ಯೋಜನೆಯಡಿ ಈ ತರಬೇತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಏಕ ಡೋಸ್ ಲಸಿಕೆಯ ತುರ್ತು ಬಳಕೆಗೆ ಅನುಮತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.