ನವದೆಹಲಿ: ಕುಂಭಮೇಳ ನಡೆಯುವ ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಹರಿದ್ವಾರ ಮೂಲದ ಸಂಘಟನೆಯೊಂದು ‘ಒಂದು ದೇಶ ಒಂದು ಚುನಾವಣೆ’ ಸೇರಿ ಒಟ್ಟು 7 ವಿಷಯಗಳ ಬಗ್ಗೆ ಉಪನ್ಯಾಸ ಆಯೋಜಿಸಿದೆ.
.ಕುಂಭ ಮೇಳದ ಕಲ್ಪವಾಸ: Apple ಸಂಸ್ಥಾಪಕ ಸ್ಟೀವ್ ಜಾಬ್ಸ್ ಪತ್ನಿ ಲ್ಯೂರೆನ್ ಭಾಗಿ.
ಜನವರಿ 13ರಂದು ಮಹಾಕುಂಭಮೇಳ ಆರಂಭವಾಗಲಿದ್ದು, ಅದಕ್ಕಿಂತ ಮುನ್ನ ದಿನ ಅಂದರೆ ಜ. 12ರಂದು ಉಪನ್ಯಾಸ ಆರಂಭಗೊಳ್ಳಲಿದೆ. ಮೊದಲ ದಿನ ಸ್ವಾಮಿ ವಿವೇಕಾನಂದರ ಬಗ್ಗೆ ಉಪನ್ಯಾಸ ಇರಲಿದೆ. ‘ಒಂದು ದೇಶ ಒಂದು ಚುನಾವಣೆ’ ವಿಷಯದ ಬಗ್ಗೆ ಜ.18ರಂದು ಉಪನ್ಯಾಸ ನಿಗದಿಯಾಗಿದೆ.

‘‘ಮಹಾಕುಂಭಮೇಳ ನಡೆಯುವ ಸ್ಥಳದಲ್ಲಿ ಒಟ್ಟು ಏಳು ಉಪನ್ಯಾಸಗಳ ಸರಣಿ ನಡೆಯಲಿವೆ. ಜನವರಿ 18ರಂದು ಒಂದು ‘ದೇಶ ಒಂದು ಚುನಾವಣೆ– ವಿಕಸಿತ ಭಾರತದ ವೇಳೆಯಲ್ಲಿ ಆರ್ಥಿಕ, ರಾಜಕೀಯ ಸುಧಾರಣೆ’ ಎನ್ನುವ ವಿಷಯದ ಬಗ್ಗೆ ಭಾಷಣ ನಡೆಯಲಿದೆ’’ ಎಂದು ದಿವ್ಯ ಪ್ರೇಮ ಸೇವಾ ಮಿಷನ್ನ ಅಧಿಕಾರಿಗಳು ತಿಳಿಸಿದ್ದಾರೆ.
.ಕುಂಭ ಮೇಳ: ಪ್ರಯಾಗ್ರಾಜ್ನಲ್ಲಿ ತಾಪಮಾನ ಕುಸಿಯುವ ಎಚ್ಚರಿಕೆ ನೀಡಿದ IMD.
ಈ ವಿಷಯದ ಬಗ್ಗೆ ಮಾತನಾಡಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಕುಂಭಮೇಳ ನಡೆಯುವ ಸ್ಥಳಕ್ಕೆ ಬಂದು ಭಾಷಣ ಮಾಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜ. 12ರಂದು ‘ಸ್ವಾಮಿ ವಿವೇಕಾನಂದ– ಸನಾತನ ಧರ್ಮದ ಜಾಗತಿಕ ದೃಷ್ಠಿ’ ಎನ್ನುವ ವಿಷಯದ ಬಗ್ಗೆ ಪ್ರವಚನ ಇರಲಿದೆ.
.ಕುಂಭ ಮೇಳದಲ್ಲಿ 45 ಕೋಟಿ ಭಕ್ತರು ಭಾಗಿ ನಿರೀಕ್ಷೆ: ಆ್ಯಂಟಿ ಡ್ರೋನ್ ಸಿಸ್ಟಮ್ ಜಾರಿ.
ಜಾಗತಿಕ ಭಯೋತ್ಪಾದನೆ, ಭಾರತದ ಸಮಗ್ರತೆ ಮತ್ತು ಸವಾಲುಗಳು, ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ, ಸಾಮಾಜಿಕ ಮಾಧ್ಯಮದಲ್ಲಿ ಗೌಪ್ಯತೆ ಮತ್ತು ಸುರಕ್ಷತೆ ಮುಂತಾದ ವಿಷಯಗಳ ಬಗ್ಗೆ ಉಪನ್ಯಾಸ ಇರಲಿದೆ ಎಂದು ಸಂಸ್ಥೆ ತಿಳಿಸಿದೆ.

ಉಪನ್ಯಾಸ ಆರಂಭಕ್ಕೂ ಮುನ್ನ ಆ ಬಗ್ಗೆ ವಿಡಿಯೊ ಪ್ರದರ್ಶನ ಕೂಡ ಇರಲಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.
.ಉತ್ತರ ಪ್ರದೇಶ | ಕುಂಭ ಮೇಳ: ಯಾತ್ರಿಗಳ ಎಣಿಕೆಗೆ ಎ.ಐ ಕ್ಯಾಮೆರಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.