ಠಾಣೆ: ಮಹಾರಾಷ್ಟ್ರದ ಠಾಣೆ ನಗರದ ಶಿಲಾ ಪಾಟಾ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಭೂಗತವಾಗಿ ಅಳವಡಿಸಿದ್ದ ವಿದ್ಯುತ್ ಕೇಬಲ್ಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಟೈರ್ ಅಂಗಡಿಗೆ ಸುತ್ತುವರಿದ ಪರಿಣಾಮ 35 ವರ್ಷದ ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.