ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ: ದೀಪಾವಳಿ ಬಳಿಕ ವಿಧಾನಸಭೆ ಚುನಾವಣೆ ಸಾಧ್ಯತೆ

ವಿಧಾನಸಭೆ ಅವಧಿ ನವೆಂಬರ್‌ 26ಕ್ಕೆ ಅಂತ್ಯ
Published : 28 ಸೆಪ್ಟೆಂಬರ್ 2024, 15:36 IST
Last Updated : 28 ಸೆಪ್ಟೆಂಬರ್ 2024, 15:36 IST
ಫಾಲೋ ಮಾಡಿ
Comments

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ  ನಡೆಯುವ ಸಾಧ್ಯತೆ ಇದೆ. 

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲು ಮುಂಬೈಗೆ ಭೇಟಿ ನೀಡಿದ್ದ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾವು 11 ಪಕ್ಷಗಳ ನಾಯಕರನ್ನು ಭೇಟಿಯಾಗಿದ್ದೇವೆ. ಚುನಾವಣೆ ದಿನಾಂಕಗಳನ್ನು ಘೋಷಿಸುವ ಮುನ್ನ ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳನ್ನು ಸಹ ಪರಿಗಣಿಸಬೇಕು ಎಂದು ಕೋರಿದ್ದಾರೆ. ಹಬ್ಬದ ವೇಳೆ ರಜೆಗಳಿರುವುದರಿಂದ, ಮತದಾನ ಪ್ರಮಾಣ ಇಳಿಕೆಗೆ ಕಾರಣವಾಗಬಹುದು ಎನ್ನುವುದನ್ನು ಗಮನಕ್ಕೆ ತಂದಿದ್ದಾರೆ‘ ಎಂದು ವಿವರಿಸಿದರು.

’ಮಹಾರಾಷ್ಟ್ರ ವಿಧಾನಸಭೆಯ ಅವಧಿಯು ನವೆಂಬರ್‌ 26ಕ್ಕೆ ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಯಬೇಕಿದೆ’ ಎಂದು ತಿಳಿಸಿದರು.

‘ನಗರ ಪ್ರದೇಶದ ಜನರ ನಿರಾಸಕ್ತಿ’

ನಗರ ಪ್ರದೇಶದಲ್ಲಿನ ಜನರು ತಮ್ಮ ಮತ ಚಲಾಯಿಸಲು ನಿರಾಸಕ್ತಿ ಹೊಂದಿರುವ ಕುರಿತು ರಾಜೀವ್‌ ಕುಮಾರ್‌ ಅವರು ಕಳವಳ ವ್ಯಕ್ತಪಡಿಸಿದರು. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿಯೂ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗವು ಕಾರ್ಯಪ್ರವೃತ್ತವಾಗಿದೆ ಎಂದು ಇದೇ ವೇಳೆ ಹೇಳಿದರು.

ಒಟ್ಟು ಕ್ಷೇತ್ರಗಳು: 288

ಎಸ್‌ಸಿ ಮೀಸಲು: 29

ಎಸ್‌ಟಿ ಮೀಸಲು: 25

ಒಟ್ಟು ಮತದಾರರು: 9.59 ಕೋಟಿ

ಪುರುಷ ಮತದಾರರು: 4.95 ಕೋಟಿ

ಮಹಿಳಾ ಮತದಾರರು: 4.64 ಕೋಟಿ

ತೃತೀಯ ಲಿಂಗಿಗಳು: 5997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT