ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮಹಾ ವಿಕಾಸ ಅಘಾಡಿ' ಕೂಟಕ್ಕೆ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಿಬಿಎ ಸೇರ್ಪಡೆ

Published 30 ಜನವರಿ 2024, 13:57 IST
Last Updated 30 ಜನವರಿ 2024, 13:57 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಯಲ್ಲಿ 'ಮಹಾ ವಿಕಾಸ ಅಘಾಡಿ' ಮೈತ್ರಿಕೂಟಕ್ಕೆ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ) ಸೇರ್ಪಡೆಯಾಗಿದೆ. 

ಈ ಬಗ್ಗೆ ಅಧಿಕೃತವಾಗಿ ಪ್ರಕಾಶ್ ಅಂಬೇಡ್ಕರ್ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್, ಎನ್‌ಸಿಪಿ (ಶರದ್ ಪವಾರ್ ಬಣ) ಮತ್ತು ಶಿವಸೇನಾ (ಉದ್ಧವ್ ಠಾಕ್ರೆ ಬಣ) ನೇತೃತ್ವದಲ್ಲಿ 'ಮಹಾ ವಿಕಾಸ ಅಘಾಡಿ' ಮೈತ್ರಿಕೂಟ ರಚನೆಯಾಗಿದೆ. ಇದೀಗ ವಂಚಿತ್ ಬಹುಜನ ಅಘಾಡಿ ಪಕ್ಷ ಸೇರ್ಪಡೆಯಾಗಿದೆ.

ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನವೇ ಮಹಾರಾಷ್ಟ್ರದಲ್ಲಿ ಈ ಬೆಳವಣಿಗೆ ನಡೆದಿದೆ. 

‘ಮಹಾವಿಕಾಸ ಅಘಾಡಿಯ ಮೈತ್ರಿಕೂಟಕ್ಕೆ ವಿಬಿಎ ಸೇರ್ಪಡೆಗೆ ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನಾ ಪಕ್ಷಗಳು ಒಕ್ಕೊರಲಿನಿಂದ ನಿರ್ಧರಿಸಿವೆ. ಸರ್ವಾಧಿಕಾರ ವಿರುದ್ಧದ ಹೋರಾಟಕ್ಕೆ ನಿಮ್ಮ ಬೆಂಬಲಕ್ಕೆ ಧನ್ಯವಾದಗಳು’ ಎಂದು ಮಹಾರಾಷ್ಟ್ರದ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರು ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ. 

ಅಂಬೇಡ್ಕರ್ ಅವರ ಮೊಮ್ಮಗ ಆಗಿರುವ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಿಬಿಎ ಪಕ್ಷವು ವಿದರ್ಭ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ತನ್ನ ಪ್ರಭಾವ ಹೊಂದಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT