ಔರಂಗಾಬಾದ್: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಮಹಿಳಾ ಐಎಎಸ್ ಅಧಿಕಾರಿ ಅಚಲ್ ಗೋಯೆಲ್ ಅವರು ಅಧಿಕಾರ ಸ್ವೀಕರಿಸುವ ಮುನ್ನವೇ ಆ ಸ್ಥಾನಕ್ಕೆ ಮತ್ತೊಬ್ಬರನ್ನು ಪ್ರಭಾರಿಯನ್ನಾಗಿ ನೇಮಿಸಿದ್ದು, ಇದರ ಹಿಂದೆ ಆಡಳಿತಾರೂಢ ರಾಜಕೀಯ ಮುಖಂಡರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ.

ಪರ್ಭಾನಿ ಕ್ಷೇತ್ರದ ಸಂಸದ ಶಿವಸೇನಾಕ್ಕೆ ಸೇರಿದವರು. ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ.

ಸ್ಥಳೀಯ ಬಿಜೆಪಿ ಶಾಸಕಿ ಮೇಘನಾ ಬೋರ್ಡಿಕರ್ ಅವರು, ‘ಕೆಲವು ಪಟ್ಟಭದ್ರ ರಾಜಕೀಯ ಹಿತಾಸಕ್ತಿಗಳ ಕಾರಣಕ್ಕಾಗಿ ಪರ್ಭಾನಿಯಲ್ಲಿ ಉತ್ತಮ ಅಧಿಕಾರಿಗಳು ಕೆಲಸ ಮಾಡಲು ಎಂದಿಗೂ ಸಾಧ್ಯವಾಗಿಲ್ಲ’ ಎಂದು ಆರೋಪಿಸಿದ್ದಾರೆ.

ಯಾವುದೇ ನಾಯಕರ ಹೆಸರನ್ನು ಉಲ್ಲೇಖಿಸದೇ ಅವರು, ‘ಶಿವಸೇನಾ ಪಕ್ಷಕ್ಕೆ ಪರ್ಭಾನಿ ಜಿಲ್ಲೆಯ ಜನರು ನೀಡಿದ ಸಹಕಾರವನ್ನು ನೆನಪಿಟ್ಟುಕೊಳ್ಳಬೇಕು’ ಎಂದು ಹೇಳಿದ್ದಾರೆ.

‘ಸಾರ್ವಜನಿಕ ಹಿತದೃಷ್ಟಿಯಿಂದ ಐಎಎಸ್ ಅಧಿಕಾರಿ ಅಚಲ್ ಗೋಯಲ್ ಅವರಿಗೆ ತಕ್ಷಣವೇ ಜವಾಬ್ದಾರಿ ನೀಡಬೇಕು’ ಎಂದು ಜಾಗೃತ್ ನಾಗರಿಕ್ ಅಘಾಡಿ ಸಂಘಟನೆ ಒತ್ತಾಯ ಮಾಡಿದೆ.

‘ಜುಲೈ 31ರಂದು ಪರ್ಭಾನಿ ಜಿಲ್ಲಾಧಿಕಾರಿ ದೀಪಕ್ ಮುಗ್ಲಿಕರ್ ನಿವೃತ್ತರಾಗಿದ್ದರು. ಆ ಸ್ಥಾನಕ್ಕೆ ಐಎಎಸ್ ಅಧಿಕಾರಿ ಅಚಲ್ ಗೋಯಲ್ ಅವರನ್ನು ನೇಮಿಸಲಾಗಿದೆ ಎನ್ನುವ ಕುರಿತು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಅಚಲ್ ಅವರು ತಮ್ಮ ಪುಟ್ಟ ಮಗುವಿನೊಂದಿಗೆ ಮುಂಚಿತವಾಗಿಯೇ ಪರ್ಭಾನಿಗೆ ಬಂದಿದ್ದರು. ಆದರೆ, ಅವರು ಅಧಿಕಾರ ಸ್ವೀಕರಿಸುವ ಮುನ್ನವೇ ದಿಢೀರನೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜೇಶ್ ಕಾಟ್ಕರ್ ಅವರಿಗೆ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಇದು ಕೆಲವು ರಾಜಕಾರಣಿಗಳ ಕುತಂತ್ರವಾಗಿದ್ದು, ನಾಚಿಕೆಗೇಡಿನ ಸಂಗತಿಯಾಗಿದೆ. ಮಹಿಳಾ ಸಬಲೀಕರಣದ ಕುರಿತು ರಾಜ್ಯ ಸರ್ಕಾರದ ಪೊಳ್ಳು ಕಾಳಜಿಯನ್ನು ಇದು ತೋರಿಸುತ್ತದೆ’ ಜಾಗೃತ್ ನಾಗರಿಕ್ ಅಘಾಡಿ ಅಧ್ಯಕ್ಷೆ ಮಾಧುರಿ ಕ್ಷೀರಸಾಗರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಕುರಿತು ಐಎಎಸ್ ಅಧಿಕಾರಿ ಅಚಲ್ ಗೋಯಲ್ ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.