ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾದೇವ್‌ ಬೆಟ್ಟಿಂಗ್‌: ನಟ ಸಾಹಿಲ್‌ ಖಾನ್‌ ಸೇರಿ ಮೂವರಿಗೆ ಪೊಲೀಸರಿಂದ ಸಮನ್ಸ್‌

Published 15 ಡಿಸೆಂಬರ್ 2023, 4:38 IST
Last Updated 15 ಡಿಸೆಂಬರ್ 2023, 4:38 IST
ಅಕ್ಷರ ಗಾತ್ರ

ಮುಂಬೈ: ಮಹಾದೇವ್‌ ಆನ್‌ಲೈನ್ ಬೆಟ್ಟಿಂಗ್‌ ಆ್ಯಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಹಿಲ್‌ ಖಾನ್‌ ಸೇರಿ ಮೂವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಪೊಲೀಸರು ಸಮನ್ಸ್‌ ಜಾರಿ ಮಾಡಿದ್ದಾರೆ.

ಬೆಟ್ಟಿಂಗ್‌ ಆ್ಯಪ್‌ನ ₹ 15 ಸಾವಿರ ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಾಹಿಲ್‌ ಖಾನ್‌ ಸೇರಿ ಮೂವರಿಗೆ ಎಸ್‌ಐಟಿ ಪೊಲೀಸರು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದ್ದಾರೆ. 

ಆ್ಯಪ್‌ ಮೂಲಕ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಕೋಲ್ಕತ್ತಾ, ಭೋಪಾಲ್, ಮುಂಬೈ ನಗರಗಳಲ್ಲಿ ಶೋಧ ನಡೆದಿತ್ತು. ದೊಡ್ಡ ಮಟ್ಟದ ಹವಾಲಾ ನಡೆದಿರುವ ಸಾಧ್ಯತೆಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದರು.

ಇತ್ತೀಚೆಗೆ ಈ ಬೆಟ್ಟಿಂಗ್‌ ಆ್ಯಪ್‌ ಮಾಲೀಕರಲ್ಲಿ ಒಬ್ಬರಾದ ರವಿ ಉಪ್ಪಾಳ್‌ನನ್ನು ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇ.ಡಿ) ಆದೇಶದ ಮೇರೆಗೆ ಇಂಟರ್‌ಪೋಲ್‌ ಹೊರಡಿಸಿದ ರೆಡ್ ಕಾರ್ನರ್ ನೋಟಿಸ್ ಆಧಾರದ ಮೇಲೆ ದುಬೈ ಪೊಲೀಸರು ರವಿ ಉಪ್ಪಾಳ್‌ನನ್ನು ವಶಕ್ಕೆ ಪಡೆದಿದ್ದಾರೆ.

ಸೌರಭ್‌ ಚಂದ್ರಕಾರ್‌ ಮತ್ತು ರವಿ ಉಪ್ಪಾಲ್ ಆರಂಭಿಸಿದ್ದ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್ ದುಬೈನಿಂದ ಕಾರ್ಯಾಚರಣೆ ನಡೆಸುತ್ತಿತ್ತು. ಇದು ಬೇನಾಮಿ ಖಾತೆಗಳ ಮೂಲಕ ಹಣ ಅಕ್ರಮ ವರ್ಗಾವಣೆ ಮಾಡುತ್ತಿತ್ತು ಎಂದು ಇ.ಡಿ ಆರೋಪಿಸಿದೆ. ಬೆಟ್ಟಿಂಗ್‌ ಆದಾಯವನ್ನು ವಿದೇಶದ ಖಾತೆಗಳಿಗೆ ವರ್ಗಾಯಿಸಲು ದೊಡ್ಡ ಪ್ರಮಾಣದ ಹವಾಲಾ ವ್ಯವಹಾರ ನಡೆಸಲಾಗುತ್ತಿತ್ತು ಎಂದು ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT