ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಎಸ್‌ಐಟಿಯಿಂದ ನಟ ಸಾಹಿಲ್‌ ಖಾನ್‌ ಬಂಧನ

Published 28 ಏಪ್ರಿಲ್ 2024, 5:36 IST
Last Updated 28 ಏಪ್ರಿಲ್ 2024, 5:36 IST
ಅಕ್ಷರ ಗಾತ್ರ

ಮುಂಬೈ: ಮಹದೇವ್ ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಹಿಲ್ ಖಾನ್ ಅವರನ್ನು ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ(ಎಸ್‌ಐಟಿ) ಛತ್ತೀಸಗಢದಲ್ಲಿ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಸಾಹಿಲ್ ಖಾನ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿದ ನಂತರ ನಟನನ್ನು ಶನಿವಾರ ಛತ್ತೀಸ್‌ಗಢದ ಜಗದಲ್‌ಪುರದಿಂದ ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿಲ್‌ ಅವರನ್ನು ಎಸ್‌ಐಟಿ ಇತ್ತೀಚೆಗೆ ವಿಚಾರಣೆ ನಡೆಸಿತ್ತು. ಬೆಟ್ಟಿಂಗ್ ಆ್ಯಪ್‌ನ ₹15 ಸಾವಿರ ಕೋಟಿ ಅವ್ಯವರಹಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಬ್ಬನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಜ್ಯದ ಕೆಲವು ಹಣಕಾಸು, ರಿಯಲ್ ಎಸ್ಟೇಟ್ ಸಂಸ್ಥೆಗಳು ಮತ್ತು ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರ ನಡುವಿನ ಹಣ ಅಕ್ರಮ ವಹಿವಾಟಿನ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಸಾಹಿಲ್ ಖಾನ್‌ ಸೇರಿದಂತೆ ಇತರ 31 ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಯುತ್ತಿದೆ. ತನಿಖೆಯು ಆರೋಪಿಗಳ ಬ್ಯಾಂಕ್‌ ಖಾತೆಗಳು, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಎಲ್ಲ ತಾಂತ್ರಿಕ ಸಾಧನಗಳನ್ನು ಪರಿಶೀಲಿಸುವುದನ್ನು ಒಳಗೊಂಡಿರುತ್ತದೆ ಎಂದು ಪೊಲೀಸರು ತಿಳಿಸಿದರು.

‘ಸ್ಟೈಲ್’ ಮತ್ತು ‘ಎಕ್ಸ್‌ಕ್ಯೂಸ್ ಮಿ’ ಚಿತ್ರಗಳಿಂದ ಗುರುತಿಸಿಕೊಂಡಿದ್ದ ಸಾಹಿಲ್ ಖಾನ್, ಫಿಟ್‌ನೆಸ್ ಎಕ್ಸ್‌ಪರ್ಟ್ ಕೂಡ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT