ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಎಪಿಯು ಇಂಡಿಯಾ ಒಕ್ಕೂಟದ ಭಾಗವಾಗಿದೆ. ಈ ಮೈತ್ರಿಯು ಲೋಕಸಭಾ ಚುನಾವಣೆಗಾಗಿ ನಡೆದಿದ್ದು, ರಾಷ್ಟ್ರಮಟ್ಟದಲ್ಲಿ ನಾವು ಜೊತೆಯಾಗಿರುತ್ತೇವೆ. ವಿಧಾನಸಭಾ ಚುನಾವಣೆಗೆ ಮಹಾರಾಷ್ಟ್ರದ ಇತರ ಭಾಗಗಳಲ್ಲಿಯೂ ಎಎಪಿ ಕಾರ್ಯಕರ್ತರು ಸಿದ್ಧತೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.