ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯಲ್ಲಿ ವಾಣಿಜ್ಯ ಕಟ್ಟಡವೊಂದು ಸೋಮವಾರ ಬೆಳಿಗ್ಗೆ ಕುಸಿದಿದ್ದು, ಇದರಲ್ಲಿ 8 ಮಂದಿ ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಮಂಕೋಲಿ ನಾಕಾದ ಹರಿಹರ್ ಕಾಂಪೌಂಡ್‌ನಲ್ಲಿರುವ ಒಂದು ಅಂತಸ್ತಿನ ಗೋದಾಮು ಬೆಳಿಗ್ಗೆ 10.30 ಕ್ಕೆ ಕುಸಿದಿದೆ’ ಎಂದು ಠಾಣೆಯ ಪ್ರಾದೇಶಿಕ ವಿಪತ್ತು ನಿರ್ವಹಣಾ ಇಲಾಖೆಯ ಮುಖ್ಯಸ್ಥ ಸಂತೋಷ್ ಕದಂ ಅವರು ಮಾಹಿತಿ ನೀಡಿದರು.

‘ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಏಳರಿಂದ ಎಂಟು ಮಂದಿ ಕಾರ್ಮಿಕರು, ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ. ಠಾಣೆ ಜಿಲ್ಲಾ ರಕ್ಷಣಾ ಪಡೆಯ ಸಿಬ್ಬಂದಿ, ವಿಪತ್ತು ನಿರ್ವಹಣಾ ಇಲಾಖೆ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ’ ಎಂದು ಅವರು ಹೇಳಿದರು.

‘ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ (ಎನ್‌ಡಿಆರ್‌ಎಫ್) ಸಹಾಯವನ್ನು ಕೋರಲಾಗಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.