ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ | ಅಮಾನುಷ ಹಲ್ಲೆ; ಎನ್‌ಸಿಸಿ ಹಿರಿಯ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲು

Published 5 ಆಗಸ್ಟ್ 2023, 4:30 IST
Last Updated 5 ಆಗಸ್ಟ್ 2023, 4:30 IST
ಅಕ್ಷರ ಗಾತ್ರ

ಥಾಣೆ: ಜೋಶಿ ಬೇಡೇಕರ್ ಕಾಲೇಜಿನ 'ನ್ಯಾಷನಲ್ ಕೆಡೆಟ್ ಕೋರ್‌'ನ(ಎನ್‌ಸಿಸಿ) ಕಿರಿಯ ವಿದ್ಯಾರ್ಥಿಗಳನ್ನು ಅಮಾನುಷವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಿದ್ಯಾರ್ಥಿಯ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೈಹಿಕ ತರಬೇತಿ ನಡೆಯುತ್ತಿರುವ ವೇಳೆ ಎಂಟು ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿ ಹಲ್ಲೆ ನಡೆಸಿದ್ದನು. ವಿದ್ಯಾರ್ಥಿಗಳ ಕೈಯನ್ನು ಹಿಂದಕ್ಕೆ ಕಟ್ಟಿ, ಕೆಸರಿನಲ್ಲಿ ತಲೆ ಬಾಗಿಸಿ ಕೋಲಿನಿಂದ ಅಮಾನುಷವಾಗಿ ಹೊಡೆದಿದ್ದನು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿತ್ತು.

'ಶುಕ್ರವಾರ ರಾತ್ರಿ ಥಾಣೆ ನಗರ ಪೊಲೀಸ್‌ ಠಾಣೆಯಲ್ಲಿ ಹಿರಿಯ ವಿದ್ಯಾರ್ಥಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್‌ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಅಡಿ ಪ್ರಕರಣ ದಾಖಲಾಗಿದೆ' ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಓದಿ : ಆಘಾತಕಾರಿ ವಿಡಿಯೊ: ಎನ್‌ಸಿಸಿ ವಿದ್ಯಾರ್ಥಿಗಳ ಮೇಲೆ ಸೀನಿಯರ್ ಅಮಾನುಷ ಹಲ್ಲೆ

ಘಟನೆ ಸಂಬಂಧಪಟ್ಟಂತೆ ಹಲ್ಲೆ ನಡೆಸಿದ ಹಿರಿಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಲಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT