ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ₹11 ಕೋಟಿ ಬಹುಮಾನ ಘೋಷಿಸಿದ ಮಹಾರಾಷ್ಟ್ರ CM

Published 5 ಜುಲೈ 2024, 13:21 IST
Last Updated 5 ಜುಲೈ 2024, 13:21 IST
ಅಕ್ಷರ ಗಾತ್ರ

ಮುಂಬೈ: ಟಿ–20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ₹11 ಕೋಟಿ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

ತಂಡದಲ್ಲಿದ್ದ ಮುಂಬೈ ಆಟಗಾರರಾದ ರೋಹಿತ್ ಶರ್ಮಾ, ಸುರ್ಯಕುಮಾರ್ ಯಾದವ್‌, ಯಶಸ್ವಿ ಜೈಸ್ವಾಲ್‌ ಹಾಗೂ ಶಿವಂದುಬೆ ಅವರಿಗೆ ವಿಧಾನ ಭವನದ ಸೆಂಟ್ರಲ್ ಹಾಲ್‌ನಲ್ಲಿ ಸನ್ಮಾನಿಸಿ ಈ ಘೋಷಣೆ ಮಾಡಿದರು.

ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ದದ ಗೆಲುವಿನ ಬಗ್ಗೆ ಆನಂದ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್‌ ಅವರ ಕ್ಯಾಚ್‌ ಅನ್ನು ವಿಶೇಷವಾಗಿ ಪ್ರಶಂಸಿದ್ದಾರೆ.

ಸಹಾಯಕ ಸಿಬ್ಬಂದಿಯಾಗಿದ್ದ ಪರಾಸ್ ಮಂಬ್ರೆ ಹಾಗೂ ಅರುಣ್ ಕನಾಡೆ ಅವರನ್ನೂ ಮುಖ್ಯಮಂತ್ರಿ ಹಾಡಿ ಹೊಗಳಿದ್ದಾರೆ.

ಗುರುವಾರ ದಕ್ಷಿಣ ಮುಂಬೈನಲ್ಲಿ ನಡೆದ ವಿಜಯೋತ್ಸವ ಮೆರವಣಿಗೆಯಲ್ಲಿ ಜನದಟ್ಟಣೆಯನ್ನು ನಿಭಾಯಿಸಿದ ಪೊಲೀಸರನ್ನೂ ಶಿಂದೆ ಶ್ಲಾಘಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT