ಮುಂಬೈ: ಕಾನೂನು ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಆಂದೋಲನಗಳನ್ನು ಹಮ್ಮಿಕೊಂಡಿದ್ದಕ್ಕೆ ಸಂಬಂಧಿಸಿ ಮಾರ್ಚ್ 2022 ರವರೆಗೆ ಸಾಮಾಜಿಕ ಕಾರ್ಯಕರ್ತರು ಹಾಗೂ ರಾಜಕೀಯ ಮುಖಂಡರ ವಿರುದ್ಧ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಇಂದು (ಬುಧವಾರ)ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಏಕನಾಥ ಶಿಂದೆ, ‘ಗಣೇಶ ಉತ್ಸವ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.

‘ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಪ್ರಕರಣಗಳನ್ನು ಸಹ ಹಿಂಪಡೆಯಲಾಗುವುದು. ಮಂಕಿಪಾಕ್ಸ್ ಸೋಂಕು ಹರಡುವಿಕೆಯ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿ ನಿಗಾ ವಹಿಸಿದೆ. ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದು ಶಿಂದೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.