ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ ಹಿರಿಯ ನಾಯಕ ಬಾಳಾಸಾಹೇಬ್ ಥೋರಟ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆ ನಡುವಿನ ಭಿನ್ನಾಭಿಪ್ರಾಯದಿಂದಾಗಿ ರಾಜೀನಾಮೆ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ನಾನಾ ಪಟೋಲೆ ಜೊತೆ ನನಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ರಾಜೀನಾಮೆ ನೀಡಿದ್ದೇನೆ. ಈ ವಿಷಯವನ್ನು ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ಥೋರಟ್ ಆಪ್ತರು ಮಾಹಿತಿ ನೀಡಿದ್ದಾರೆ.

ನನ್ನ ನಿರ್ಣಯವನ್ನು ಯಾವುದೇ ಕಾರಣಕ್ಕೂ ಬದಲಿಸುವುದಿಲ್ಲ ಎಂದು ಥೋರಟ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ನಡುವೆ ನಾನಾ ಪಟೋಲೆ ವಿರುದ್ಧ ಹರಿಹಾಯ್ದಿದ್ದಾರೆ ಎಂದು ವರದಿಯಾಗಿದೆ.

ಬಾಳಾಸಾಹೇಬ್ ಥೋರಟ್ ರಾಜೀನಾಮೆ ಕುರಿತಂತೆ ಯಾವುದೇ ಪ್ರತಿಕ್ರಿಯೆ ನೀಡದ ನಾನಾ ಪಟೋಲೆ ಅವರು ನಾನು ಯಾವುದೇ ಕೊಳಕು ರಾಜಕೀಯದಲ್ಲಿ ತೊಡಗಿಸಿಕೊಂಡಿಲ್ಲ ಎಂದಷ್ಟೇ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.