ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮತ್ತೊಬ್ಬರ ಡಿಸಿಎಂ ದೇವೇಂದ್ರ ಫಡಣವಿಸ್ ಅವರೊಂದಿಗೆ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಅಧಿಕೃತ ನಿವಾಸಕ್ಕೆ ಸೋಮವಾರ ತಡರಾತ್ರಿ ಭೇಟಿ ನೀಡಿದ್ದಾರೆ.
ಅಜಿತ್ ಪವಾರ್ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಕ್ಕಿಗಾಗಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ತಿಕ್ಕಾಟ ನಡೆಸುತ್ತಿರುವ ಹೊತ್ತಿನಲ್ಲಿ ಈ ಬೆಳವಣಿಗೆಯಾಗಿರುವುದು ಕುತೂಹಲ ಮೂಡಿಸಿದೆ.
ಡಿಸಿಎಂಗಳು ಶಿಂದೆ ಅವರನ್ನು ಭೇಟಿ ಮಾಡುವುದಕ್ಕೂ ಮುನ್ನ ಕೇಂದ್ರ ಸಚಿವ ರಾಮದಾಸ್ ಅಠವಾಲೆ ಅವರು ಅಜಿತ್ ಪವಾರ್ ಬಣದ ಎನ್‌ಸಿಪಿ ನಾಯಕ ಛಗನ್ ಬುಜಬಲ್ ಅವನ್ನು ಭೇಟಿ ಮಾಡಿದ್ದರು.
ಅಠವಾಲೆ ಅವರು ಗುರುವಾರ ಅಜಿತ್ ಪವಾರ್ ಅವರೊಂದಿಗೆ ಮುಂಬೈನಲ್ಲಿ ಮಾತುಕತೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.