ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡಣವೀಸ್ ಅವರು ನಾಳೆ (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು (ಬುಧವಾರ) ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡಣವೀಸ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಗುರುವಾರ ಸಂಜೆ 5.30ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಆಜಾದ್ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಏಕನಾಥ ಶಿಂದೆ ಮತ್ತು ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ದೇವೇಂದ್ರ ಫಡಣವೀಸ್ ಹೆಸರು ಮುಂಚೂಣಿಯಲ್ಲಿದ್ದ ಕಾರಣ ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಹಾಗೂ ಶಿವಸೇನಾ (ಶಿಂದೆ ಬಣ) ಮುಖ್ಯಸ್ಥ ಏಕನಾಥ ಶಿಂದೆ ಅವರು ನೂತನ ‘ಮಹಾಯುತಿ’ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಸೋಮವಾರ ಮತ್ತು ಮಂಗಳವಾರ ನವದೆಹಲಿಯಲ್ಲಿದ್ದುಕೊಂಡು, ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸಿದ್ದಾರೆ. ನೂತನ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ಪಡೆಯಲು ಎನ್ಸಿಪಿ ಮತ್ತು ಶಿವಸೇನಾ ತೀವ್ರ ಕಸರತ್ತು ನಡೆಸಿವೆ.

ಫಡಣವೀಸ್ ಅವರು ಮಂಗಳವಾರ ರಾತ್ರಿ, ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಶಿಂದೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಳೆದ ವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಇವರಿಬ್ಬರು ಭೇಟಿಯಾಗಿದ್ದು ಇದೇ ಮೊದಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.