ಮುಂಬೈ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 2,886 ಹೊಸ ಕೋವಿಡ್ ಪ್ರಕರಣಗಳು ಬೆಳಕಿಗೆ ಬಂದಿದ್ದು, ಅಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 20,00,878ಕ್ಕೆ ತಲುಪಿದೆ. ಆ ಮೂಲಕ ಭಾರತದಲ್ಲಿ 20 ಲಕ್ಷ ಪ್ರಕರಣಗಳನ್ನು ಹೊಂದಿದ ಮೊದಲ ರಾಜ್ಯ ಮಹಾರಾಷ್ಟ್ರ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2020ರ ಮಾರ್ಚ್ ಎರಡನೇ ವಾರದಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ ಮಹಾರಾಷ್ಟ್ರದಲ್ಲಿ ವರದಿಯಾಗಿತ್ತು. ಅಲ್ಲಿಂದ ಹತ್ತು ತಿಂಗಳ ಬಳಿಕ ಪ್ರಕರಣಗಳ ಸಂಖ್ಯೆ 20,00,878ಕ್ಕೆ ತಲುಪಿದೆ.

ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಹೊಸದಾಗಿ 52 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ವರೆಗೆ ಮೃತಪಟ್ಟ ಸೋಂಕಿತರ ಸಂಖ್ಯೆ 50,634ಕ್ಕೆ ಮುಟ್ಟಿದೆ.

ಕಳೆದ 24 ಗಂಟೆಗಳಲ್ಲಿ 3,980 ಸೋಂಕಿತರು ಗುಣಮುಖರಾಗಿದ್ದು, ಮಹಾರಾಷ್ಟ್ರದಲ್ಲಿ ಗುಣಮುಖರಾದವರ ಒಟ್ಟು ಸಂಖ್ಯೆ 19 ಲಕ್ಷಕ್ಕೂ ಅಧಿಕವಾಗಿದೆ. 45,622 ಸಕ್ರಿಯ ಪ್ರಕರಣಗಳಿವೆ.

ಮುಂಬೈ ಮಹಾನಗರದಲ್ಲಿ 527 ಹೊಸ ಪ್ರಕರಣಗಳು ವರದಿಯಾಗಿದ್ದು, ಈ ವರೆಗೆ 3,04,653 ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲ ಪ್ರಕರಣ ವರದಿಯಾದ ಹತ್ತು ತಿಂಗಳ ಬಳಿಕ ಮುಂಬೈನಲ್ಲಿ ಒಟ್ಟು 11,278 ಮಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 15,223 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,06,10,883 ಮುಟ್ಟಿದೆ.

ಇದೇ ಅವಧಿಯಲ್ಲಿ 19,965 ಮಂದಿ ಗುಣಮುಖರಾಗಿದ್ದು, ಸೋಂಕಿನಿಂದ 151 ಜನ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.