ಮುಂಬೈ: ಮಹಾರಾಷ್ಟ್ರದ ಪ್ರವಾಹ ಸಂತ್ರಸ್ತ ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಎನ್ಸಿಪಿ ನಾಯಕ ಹಾಗೂ ಆಹಾರ ಮತ್ತು ನಾಗರಿಕ ಸಚಿವ ಛಗನ್ ಭುಜಬಲ್ ಅವರು ತಮ್ಮ ಒಂದು ತಿಂಗಳ ಸಂಬಳವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

‘ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ರೈತರಿಗೆ ಅಪಾರ ನಷ್ಟವಾಗಿದ್ದು, ಅವರಿಗೆ ಸಹಾಯವಾಗುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತದೆ’ ಎಂದು ಸಚಿವ ಛಗನ್ ಭುಜಬಲ್ ಅವರು ಹೇಳಿದ್ದಾರೆ.

ಛಗನ್ ಭುಜಬಲ್ ಅವರ ಸ್ವಕ್ಷೇತ್ರ ನಾಸಿಕ್ ಜಿಲ್ಲೆಯಲ್ಲೂ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಅಪಾರ ಪ್ರಮಾಣದ ಕೃಷಿ ನಾಶವಾಗಿದೆ. ಪ್ರವಾಹ ಪೀಡಿತ ಸ್ಥಳಗಳಿಗೆ ಅವರು ಗುರುವಾರ ಭೇಟಿ ನೀಡಲಿದ್ದಾರೆ.

ಮಹಾರಾಷ್ಟ್ರದ 8 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, 8 ಜನರು ಮೃತಪಟ್ಟಿದ್ದಾರೆ. 30 ಸಾವಿರ ಹೆಕ್ಟೆರ್ ಕೃಷಿ ಭೂಮಿಯು ನಾಶವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.