ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆ ಪ್ರಕರಣದ ತನಿಖೆ ವಿಳಂಬ: ಮನನೊಂದು ಬೆರಳು ಕತ್ತರಿಸಿಕೊಂಡ ವ್ಯಕ್ತಿ

Published 19 ಆಗಸ್ಟ್ 2023, 3:49 IST
Last Updated 19 ಆಗಸ್ಟ್ 2023, 3:49 IST
ಅಕ್ಷರ ಗಾತ್ರ

ಮುಂಬೈ: ಅಣ್ಣ ಮತ್ತು ಅತ್ತಿಗೆಯ ಆತ್ಮಹತ್ಯೆ ಪ್ರಕರಣದ ತನಿಖೆ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ವ್ಯಕ್ತಿಯೊಬ್ಬ ಬೆರಳನ್ನು ಕತ್ತರಿಸಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 1ರಂದು ನಂದಕುಮಾರ್ ನಾನಾವರೆ, ಪತ್ನಿ ಉಜ್ವಲಾ ನಾನಾವರೆ ದಂಪತಿ ಥಾಣೆ ಜಿಲ್ಲೆಯ ಉಲ್ಲಾಸನಗರದಲ್ಲಿ ತಮ್ಮ ಮನೆಯ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನಾ ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿತ್ತು.

ಪೊಲೀಸರು ಪ್ರಕರಣದ ತನಿಖೆ ನಡೆಸಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಂದಕುಮಾರ್ ಅವರ ಸಹೋದರ ಧನಂಜಯ್ ನಾನಾವರೆ ಪ್ರತಿಭಟನೆ ನಡೆಸಿದ್ದರು. ಬಳಿಕ ತನ್ನ ಬೆರಳನ್ನು ಕಠಾರಿಯಿಂದ ಕತ್ತರಿಸಿಕೊಂಡು ವಿಡಿಯೊ ಚಿತ್ರೀಕರಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಡೆತ್‌ನೋಟ್‌ ಆಧಾರದ ಮೇಲೆ ಕಮಲೇಶ್ ನಿಕಮ್, ನರೇಶ್ ಗಾಯಕವಾಡ, ಗಣಪತಿ ಕಾಂಬಳೆ ಮತ್ತು ಶಶಿಕಾಂತ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದಾರೆ ಎಂದು ಧನಂಜಯ್ ಆರೋಪಿಸಿದ್ದಾರೆ. ಜತೆಗೆ, ಅಣ್ಣ ಮತ್ತು ಅತ್ತಿಗೆಯ ಆತ್ಮಹತ್ಯೆಗೆ ಇವರೇ ಕಾರಣರಾಗಿದ್ದು, ಇವರ ವಿರುದ್ಧ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ನಮ್ಮ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ತನ್ನ ದೇಹದ ಅಂಗಾಂಗಗಳನ್ನು ಕತ್ತರಿಸಿ ಸರ್ಕಾರಕ್ಕೆ ಕಳುಹಿಸುತ್ತೇನೆ ಎಂದು ಧನಂಜಯ್ ವಿಡಿಯೊದಲ್ಲಿ ಹೇಳಿಕೊಂಡಿದ್ದರು.

ಧನಂಜಯ್ ಅವರನ್ನು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT