ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್ ನೇಮಕ

Published 30 ಜೂನ್ 2024, 13:35 IST
Last Updated 30 ಜೂನ್ 2024, 13:35 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸಿದ್ದಾರೆ.

ನೇರ ಹಾಗೂ ಸಂವೇದನಾಶೀಲ ವ್ಯಕ್ತಿತ್ವದ ಐಎಎಸ್‌ ಅಧಿಕಾರಿ ಸುಜಾತಾ ಸೌನಿಕ್‌ ಅವರು ಮಹಾರಾಷ್ಟ್ರದ 45ನೇ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

ಸುಜಾತಾ ಅವರು 1987ನೇ ಬ್ಯಾಚ್‌ನ ಅಧಿಕಾರಿ. ನಿತಿನ್ ಕರೀರ್‌ ಅವರು ಈ ಹಿಂದೆ ಮುಖ್ಯ ಕಾರ್ಯದರ್ಶಿಯಾಗಿದ್ದರು. ಇವರ ನಿವೃತ್ತಿಯ ಬಳಿಕ ಸುಜಾತಾ ಅವರ ನೇಮಕವಾಗಿದೆ. ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕವಾಗುವ ಮೊದಲು ಸುಜಾತಾ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಜೊತೆಗೆ ಸಾಮಾನ್ಯ ಆಡಳಿತ ಇಲಾಖೆಯ ನೇತೃತ್ವವನ್ನೂ ವಹಿಸಿಕೊಂಡಿದ್ದರು. ಸಾರ್ವಜನಿಕ ನೀತಿ ರೂಪಿಸುವಲ್ಲಿ ಹಾಗೂ ಆಡಳಿತ ನಿರ್ವಹಣೆಯಲ್ಲಿ ಸುಜಾತಾ ಅವರಿಗೆ 30 ವರ್ಷಗಳ ಅನುಭವವಿದೆ.

ರಾಜ್ಯದಲ್ಲಿ ಉನ್ನತ ಹುದ್ದೆಯಲ್ಲಿ ಸುಜಾತ ಅವರು ಮಾತ್ರವಲ್ಲದೆ, ಪೊಲೀಸ್‌ ಮಹಾನಿರ್ದೇಶಕಿಯಾಗಿ ರಶ್ಮಿ ಶುಕ್ಲಾ ಅವರೂ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ರಾಜ್ಯದ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಉನ್ನತ ಹುದ್ದೆಯಲ್ಲಿ ದಂಪತಿ: 

ಸುಜಾತಾ ಅವರಂತೆ ಅವರ ಪತಿ ಮನೋಜ್‌ ಸೌನಿಕ್‌ ಕೂಡ ಐಎಎಸ್‌ ಅಧಿಕಾರಿಯಾಗಿದ್ದಾರೆ. ಮನೋಜ್‌ ಅವರು ಸದ್ಯ ಮುಖ್ಯಮಂತ್ರಿ ಅವರಿಗೆ ಪ್ರಧಾನ ಸಲಹೆಗಾರರಾಗಿದ್ದಾರೆ. ದೇಶದಲ್ಲೇ ಇದೇ ಮೊದಲ ಬಾರಿಗೆ ರಾಜ್ಯದ ಉನ್ನತ ಹುದ್ದೆಯಲ್ಲಿ ದಂಪತಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿತಿನ್ ಕರೀರ್‌ ಅವರಿಗೆ ಮೊದಲು ಮನೋಜ್‌ ಅವರು ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಈಗ ಮನೋಜ್‌ ಅವರ ಪತ್ನಿ ಸುಜಾತಾ ಅವರು ಈ ಸ್ಥಾನಕ್ಕೆ ನೇಮಕವಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT