ಮುಂಬೈ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಬುಧವಾರ ರಾಜ್ಯದ ಪ್ರಕರಣಗಳ ತನಿಖೆಗಾಗಿ ಸಿಬಿಐಗೆ ನೀಡಿದ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಂಡಿದೆ.

ಈ ನಿರ್ಧಾರದಿಂದಾಗಿ ಇನ್ನು ಮುಂದೆ ಯಾವುದೇ ಪ್ರಕರಣದ ತನಿಖೆಗಾಗಿ ಸಿಬಿಐ ಮಹಾರಾಷ್ಟ್ರವನ್ನು ಪ್ರವೇಶಿಸಿಸುವುದಕ್ಕೂ ಮೊದಲು ರಾಜ್ಯ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಲಿದೆ. ಬುಧವಾರ ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಭವಿಷ್ಯದ ಪ್ರಕರಣಗಳಿಗೆ ಈ ನಿರ್ಧಾರ ಅನ್ವಯವಾಗಲಿದೆಯಾದರೂ, ಈಗಾಗಲೇ ಸಿಬಿಐ ಕೈಗೊಂಡಿರುವ ಪ್ರಕರಣಗಳಿಗೆ ಈ ನಿರ್ಧಾರದಿಂದ ಯಾವುದೇ ಪರಿಣಾಮವಾಗದು.

ಮಹಾರಾಷ್ಟ್ರ ಸರ್ಕಾರದ ಆದೇಶ

‘1946ರ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ’ ಕಾಯ್ದೆ ಅಡಿಯಲ್ಲಿ, ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಕೈಲಾಸ್ ಗಾಯಕ್ವಾಡ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ‘1989ರ ಫೆಬ್ರವರಿಯಲ್ಲಿ ಸಿಬಿಐಗೆ ರಾಜ್ಯ ಸರ್ಕಾರ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ರಾಜ್ಯದ ಯಾವುದೇ ಪ್ರಕರಣದ ತನಿಖೆ ಆರಂಭಿಸುವ ಮೊದಲು ಸರ್ಕಾರದ ಒಪ್ಪಿಗೆ ಪಡೆಯುವುದು ಅಗತ್ಯವಾಗಲಿದೆ,’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಟಿಆರ್‌ಪಿ ಅಕ್ರಮ ಪ್ರಕರಣದ ಸಂಬಂಧ ಉತ್ತರ ಪ್ರದೇಶದ ಲಖನೌನ ಹಝರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಜಾಹೀರಾತು ಏಜೆನ್ಸಿಯೊಂದು ದಾಖಲಿಸಿದ ದೂರನ್ನು ಅಲ್ಲಿನ ಪೊಲೀಸರು ಸಿಬಿಐಗೆ ಶಿಫಾರಸು ಮಾಡಿದ್ದಾರೆ. ಹೀಗಾಗಿ, ಸಿಬಿಐ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಿಬಿಐ ಅನ್ನು ನಿರ್ಬಂಧಿಸುವ ನಿರ್ಧಾರ ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.