ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ಹಾಗೂ ಜಾರ್ಖಂಡ್‌ನ 81 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮತ ಎಣಿಕೆ ಆರಂಭಗೊಂಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಹಾಗೂ ಎನ್‌ಸಿಪಿ ನೇತೃತ್ವದ ಮಹಾಯುತಿ ಬಣ ಹಾಗೂ ಕಾಂಗ್ರೆಸ್, ಶಿವಸೇನಾ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಪಕ್ಷಗಳ ಮಹಾ ವಿಕಾಸ ಅಘಾಡಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮತ್ತೊಂದೆಡೆ ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಹಾಗೂ ಜೆಎಂಎಂ ಮೈತ್ರಿ ವಿರುದ್ಧ ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ನೇರ ಸ್ಪರ್ಧೆ ನಡೆದಿದೆ. ಮತ ಎಣಿಕೆ ಕೇಂದ್ರದಲ್ಲಿ ಅಂತಿಮ ಸಿದ್ಧತೆಗಳನ್ನು ಅಧಿಕಾರಿಗಳು ಪೂರೈಸಿದ್ದು, ಕೆಲವೇ ಕ್ಷಣಗಳಲ್ಲಿ ಮತದಾನ ಆರಂಭವಾಗಲಿದೆ.