ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್, ಗುಜರಾತ್ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್–19 ಪ್ರಕರಣಗಳಲ್ಲಿ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳ ಪೈಕಿ ಶೇ 85.95 ಈ ರಾಜ್ಯಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ದೇಶದಲ್ಲಿ 24 ಗಂಟೆ ಅವಧಿಯಲ್ಲಿ 14,989 ಪ್ರಕರಣಗಳು ದೃಢಪಟ್ಟಿವೆ ಎಂದೂ ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ದಿನವೊಂದರ ಗರಿಷ್ಠ, 7,863 ಪ್ರಕರಣ ದೃಢಪಟ್ಟಿವೆ. ಕೇರಳದಲ್ಲಿ 2,938, ಪಂಜಾಬ್‌ನಲ್ಲಿ 729 ಹೊಸ ಪ್ರಕರಣಗಳು ವರದಿಯಾಗಿವೆ.

ಓದಿ:Covid-19 India Update: ಒಂದೇ ದಿನ 14 ಸಾವಿರಕ್ಕೂ ಅಧಿಕ ಪ್ರಕರಣ

‘ವಾರದಿಂದ ವಾರದ ಅವಧಿಯಲ್ಲಿ ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಮಧ್ಯ ಪ್ರದೇಶ, ದೆಹಲಿ, ಹರಿಯಾಣ ಮತ್ತು ಕರ್ನಾಟಕದಲ್ಲಿ ಗರಿಷ್ಠ ಹೆಚ್ಚಳ ಕಂಡುಬಂದಿದೆ. ಮಹಾರಾಷ್ಟ್ರವೊಂದರಲ್ಲೇ ವಾರದ ಅವಧಿಯಲ್ಲಿ 16,012 ಪ್ರಕರಣಗಳು ದಾಖಲಾಗಿವೆ’ ಎಂದು ಸಚಿವಾಲಯ ತಿಳಿಸಿದೆ.

ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಜತೆ ಕೇಂದ್ರವು ನಿರಂತರ ಸಂಪರ್ಕದಲ್ಲಿದೆ ಎಂದೂ ಸಚಿವಾಲಯ ಹೇಳಿದೆ.

ಪರಿಣಾಮಕಾರಿ ಸೋಂಕು ಪತ್ತೆ ಪರೀಕ್ಷೆ, ಸಪರ್ಕ ಪತ್ತೆ, ಸೋಂಕು ದೃಢಪಟ್ಟವರ ಪ್ರತ್ಯೇಕವಾಸ, ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನು ಆದಷ್ಟು ಬೇಗನೇ ಪತ್ತೆಹಚ್ಚಿ ಕ್ವಾರಂಟೈನ್‌ನಲ್ಲಿರಿಸುವ ಅಗತ್ಯವಿದೆ ಎಂದು ಸಚಿವಾಲಯ ಹೇಳಿದೆ.

ಓದಿ:ಲಸಿಕೆ ಸೂತ್ರ ಕಳವು; ಆರೋಪ ತಳ್ಳಿ ಹಾಕಿದ ಚೀನಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.