ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ವಿಚ್ಛೇದನ ಕೋರಿದ ಪತ್ನಿ, ಮನನೊಂದು ಪತಿ ಆತ್ಮಹತ್ಯೆ

Published 8 ಆಗಸ್ಟ್ 2023, 14:28 IST
Last Updated 8 ಆಗಸ್ಟ್ 2023, 14:28 IST
ಅಕ್ಷರ ಗಾತ್ರ

ನಾಗ್ಪುರ: ಪತ್ನಿ ವಿಚ್ಛೇದನ ಕೇಳಿದ ಕಾರಣಕ್ಕೆ ಪತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 26 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಅಜ್ನಿ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಮ್ಟೆಕ್ ನಗರದಲ್ಲಿ ಈ ಘಟನೆ ನಡೆದಿದೆ. ಮಧ್ಯಪ್ರದೇಶದ ಬಾಲಾಘಾಟ್‌ ಜಿಲ್ಲೆಯವರಾದ ಮೋಹಿತ್‌ ಸುಖಚಂದ್‌ ಚೌಧರಿ ಅವರು ತಮ್ಮ ಬಾಡಿಗೆ ಮನೆಯಲ್ಲಿ ಸೀಲಿಂಗ್‌ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೇಂಟರ್‌ ಕೆಲಸ ಮಾಡುತ್ತಿದ್ದ ಚೌಧರಿ ಅವರು ಕಳೆದ ತಿಂಗಳು ವಿವಾಹವಾಗಿದ್ದರು. ಆದರೆ, ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದು, ಪತ್ನಿ ತನ್ನ ಪೋಷಕರ ಮನೆ ಸೇರಿದ್ದರು. ಅಂತಿಮವಾಗಿ, ಪತಿ ಚೌಧರಿಯಿಂದ ಪತ್ನಿ ವಿಚ್ಛೇದನ ಕೇಳಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನಾ ಸ್ಥಳದಿಂದ ಮರಣ ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನ್ನ ಪತ್ನಿ ವಿಚ್ಛೇದನ ಕೇಳಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಚೌಧರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT