ಮುಂಬೈ: ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರಿದ್ದ ಹೆಲಿಕಾಪ್ಟರ್, ನಿಗದಿತ ಹೆಲಿಪ್ಯಾಡ್ನಲ್ಲಿ ಲ್ಯಾಂಡ್ ಆಗದೆ, ಕಾರು ನಿಲುಗಡೆ ಸ್ಥಳದಲ್ಲಿ ಲ್ಯಾಂಡ್ ಆಗಿದ್ದು, ಭುಜಬಲ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜಯಂತ್ಯುತ್ಸವದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶನಿವಾರ ಪುಣೆ ಜಿಲ್ಲೆಯ ಖಾನವಾಡಿಗೆ ತೆರಳುತ್ತಿ ದ್ದಾಗ ಘಟನೆ ಸಂಭವಿಸಿದೆ.

ಘಟನೆ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ತಿಳಿಸಿದ್ದಾರೆ.

‘ಧೂಳಿನಿಂದಾಗಿ ನಿಗದಿತ ಹಿಲಿಪ್ಯಾಡ್ ಗೋಚರವಾಗದ ಕಾರಣ ಕಾರು ನಿಲುಗಡೆ ಸ್ಥಳದಲ್ಲಿ ಲ್ಯಾಂಡ್ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-51-1430075849

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.