ಮುಂಬೈ: ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಚಗನ್ ಭುಜಬಲ ಅವರಿಗೆ ಸೋಮವಾರ ಕೋವಿಡ್ ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಈ ತಿಂಗಳು ಭುಜಬಲ್ ಸೇರಿದಂತೆ ಮಹಾರಾಷ್ಟ್ರದಒಟ್ಟು ಏಳು ಸಚಿವರಿಗೆ ಕೊರೊನಾ ಸೋಂಕು ತಗುಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಚಗನ್,‘ ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಎರಡು–ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆಗೆ ಒಳಗಾಗಬೇಕು’ ಎಂದು ಕೋರಿದ್ದಾರೆ.

‘ನಾನು ಆರೋಗ್ಯವಾಗಿದ್ದೇನೆ. ಯಾರೂ ಚಿಂತಿಸುವ ಅಗತ್ಯವಿಲ್ಲ. ಕೋವಿಡ್ ಸಮಯದಲ್ಲಿ ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಗಮನವಹಿಸಬೇಕು. ಕಡ್ಡಾಯವಾಗಿ ಮುಖಗವಸು ಧರಿಸಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು’ ಎಂದೂ ಅವರು ಮನವಿ ಮಾಡಿದ್ದಾರೆ.

ಸಚಿವರಾದ ಅನಿಲ್ ದೇಶ್‌ಮುಖ್, ರಾಜೇಂದ್ರ ಶಿಂಗ್ನೆ, ಜಯಂತ್ ಪಾಟೀಲ್, ರಾಜೇಶ್ ಟೋಪೆ, ಸತೇಜ್ ಪಾಟೀಲ್ ಮತ್ತು ಬಚು ಕಡು ಅವರಿಗೂ ಸೋಂಕು ತಗುಲಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.