ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ: ಸೆ 7ರಿಂದ ಮುಂಗಾರು ಅಧಿವೇಶನ, 2 ದಿನಕ್ಕೆ ಸೀಮಿತ

Last Updated 4 ಸೆಪ್ಟೆಂಬರ್ 2020, 6:33 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ವಿಧಾನಮಂಡಲದ ಮುಂಗಾರು ಅಧಿವೇಶನ ಇದೇ 7ರಿಂದ ಆರಂಭವಾಗಲಿದೆ. ಕೋವಿಡ್‌–19 ವ್ಯಾಪಕವಾಗಿ ಹರಡುತ್ತಿರುವ ಕಾರಣ ಅಧಿವೇಶನವನ್ನು ಎರಡು ದಿನಕ್ಕೆ ಸೀಮಿತಗೊಳಿಸಲಾಗಿದೆ.

ಮಹಾರಾಷ್ಟ್ರ ಶಾಸಕಾಂಗದ ಇತಿಹಾಸದಲ್ಲಿ ಅತಿ ಕಡಿಮೆ ಅವಧಿಯ ಮುಂಗಾರು ಅಧಿವೇಶನ ಇದಾಗಿದೆ. ರಾಜ್ಯದಲ್ಲಿ 8.43 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ.

ಕೋವಿಡ್‌ ಮಾರ್ಗಸೂಚಿಗಳಿಗೆ ಅನ್ವಯವಾಗಿ ಅಧಿವೇಶವನ್ನು ಸುಸೂತ್ರವಾಗಿ ನಡೆಸಲು ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಅಧಿವೇಶನಕ್ಕೆ ಬರುವ ಶಾಸಕರಿಗೆ ಆ್ಯಂಟಿಜನ್‌ ಟೆಸ್ಟ್‌ ಕಡ್ಡಾಯ, ಕೋವಿಡ್‌ ಕಿಟ್‌ ವಿತರಣೆ, ಶಾಸಕರ ನಡುವೆ ಪರಸ್ಪರ ಅಂತರ ಕಾಯ್ದುಕೊಳ್ಳುವುದಕ್ಕೆ ಪೂರಕವಾಗಿ ಹೊಸ ರೀತಿಯಲ್ಲಿ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ವಿಧಾನಭವನದ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪ ಇರುವುದಿಲ್ಲ. ಪೂರಕ ಅಂದಾಜು ಬೇಡಿಕೆ ಮತ್ತು ಕೆಲ ಮಸೂದೆಗಳ ಮಂಡನೆಗೆ ಅವಕಾಶ ಇರುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಿಲ್‌ ಪರಬ್‌ ಹೇಳಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ಶಿವಸೇನೆ ನೇತೃತ್ವದ ಎಂವಿಎ ಸರ್ಕಾರದ ಮೊದಲ ಮುಂಗಾರು ಅಧಿವೇಶನ ಇದಾಗಿದೆ.ಈ ಮೊದಲು ಜೂನ್‌ 22ರಂದು ಅಧಿವೇಶನದ ದಿನಾಂಕ ನಿಗದಿಪಡಿಸಲಾಗಿತ್ತು. ಕೋವಿಡ್‌ ಕಾರಣದಿಂದ ದಿನಾಂಕವನ್ನು ಎರಡು ಬಾರಿ ಮುಂದೂಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT