ಕೊಲ್ಹಾಪುರ: ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ನಡೆದ ಗ್ರಾಮ ಜಾತ್ರೆಯಲ್ಲಿ ಪಾಲ್ಗೊಂಡಿದ್ದ 250ಕ್ಕೂ ಹೆಚ್ಚು ಮಂದಿ ಶಂಕಿತ ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದಾರೆ ಎಂದು ಪೊಲೀಸರು ಇಂದು (ಬುಧವಾರ) ತಿಳಿಸಿದ್ದಾರೆ.

ಈ ಪೈಕಿ ಶಿರೋಲ್ನ ಆಸ್ಪತ್ರೆಯಲ್ಲಿ ಸುಮಾರು 50 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಕುರುಂದವಾಡ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಶಿವನಾಕವಾಡಿ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಹಾಲಿನಿಂದ ತಯಾರಿಸಿದ 'ಖೀರ್' ಅನ್ನು ಪ್ರಸಾದದ ರೂಪದಲ್ಲಿ ನೀಡಲಾಗಿತ್ತು.

ಇದನ್ನು ಸೇವಿಸಿದ್ದ ಜನರಲ್ಲಿ ಇಂದು ಬೆಳಿಗ್ಗೆಯಿಂದ ಅತಿಸಾರ, ವಾಂತಿ ಮತ್ತು ಜ್ವರ ಕಾಣಿಸಿಕೊಂಡಿದೆ. ಈವರೆಗೆ 250ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಆಹಾರ ಕಲುಷಿತಗೊಂಡಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಆಹಾರದ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಕೆ.ಆರ್.ಪುರ: ಕೌದೇನಹಳ್ಳಿ ಕೆರೆಗೆ ಕಲುಷಿತ ನೀರು; ಜಲಚರಗಳ ಜೀವಕ್ಕೆ ಕುತ್ತು .ಕಲುಷಿತ ನೀರು ಸೇವನೆ ಪ್ರಕರಣ: ಮೃತ ಬಾಲಕಿ ಸಾವಿಗೆ ನ್ಯಾಯ ಒದಗಿಸಲು ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.