ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂದಿಸಿ ಅಲ್ಲಿನ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಉದ್ದೇಶಿತವಲ್ಲದ ಹತ್ಯೆ), 337 ಮತ್ತು 338 (ಮಾನವ ಜೀವಕ್ಕೆ ಅಪಾಯ ಉಂಟುಮಾಡುವಂಥ ಅಥವಾ ನಿರ್ಲಕ್ಷ್ಯದ ಕೃತ್ಯ) ಹಾಗೂ 38ರ (ಸಾಮಾನ್ಯ ಉದ್ದೇಶದಲ್ಲಿ ಹಲವರು ಎಸಗಿರುವ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಓದಿ:15 ಮಂದಿ ಸಾವಿಗೆ ನಿರ್ಲಕ್ಷ್ಯವೇ ಕಾರಣ: ಆರೋಪ

ವಿರಾರ್‌ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಗೆ ಸಂಭವಿಸಿದ್ದ ಅಗ್ನಿ ದುರಂತದಲ್ಲಿ 15 ಮಂದಿ ಮೃತಪಟ್ಟಿದ್ದರು.

ದುರಂತದಲ್ಲಿ ಮೃತಪಟ್ಟ ಕೋವಿಡ್ ರೋಗಿಗಳ ಪ್ರತಿ ಕುಟುಂಬಕ್ಕೆ ₹5 ಲಕ್ಷ ಹಾಗೂ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ತಲಾ ₹1 ಲಕ್ಷ ಪರಿಹಾರ ನೀಡುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಘೋಷಿಸಿತ್ತು.

ಓದಿ:ಆಮ್ಲಜನಕ ಕೊರತೆಯಿಂದ ದೇಶದ ಎರಡು ಆಸ್ಪತ್ರೆಗಳಲ್ಲಿ 30 ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.