ನಾಗ್ಪುರ: ಗಣರಾಜ್ಯೋತ್ಸವದ ಅಂಗವಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಧಾನ ಕಚೇರಿಯಲ್ಲಿ ಗುರುವಾರ ರಾಷ್ಟ್ರಧ್ವಜ ಹಾರಿಸಲಾಯಿತು.
ನಾಗ್ಪುರ ಮಹಾನಗರ ಸಹ ಸಂಘಚಾಲಕ ಶ್ರೀಧರ ಗಾಡ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ಆರ್‌ಎಸ್‌ಎಸ್ ಪ್ರಚಾರಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ ಕಾರಣ ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿಲ್ಲ ಎಂದು ಮೂಲಗಳು ಹೇಳಿವೆ.