ಠಾಣೆ: ರಸ್ತೆ ಗುಂಡಿಯಿಂದಾಗಿ ದ್ವಿಚಕ್ರ ವಾಹನ ಉರುಳಿ ಬಿದ್ದು, ತಾಯಿ–ಮಗ ಸಾವಿಗೀಡಾದ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಾಂಡಿಯಲ್ಲಿ ನಡೆದಿದೆ.

ಮುಂಬೈ–ನಾಸಿಕ್ ಹೆದ್ದಾರಿಯ ಮಂಕೋಲಿ ಜಂಕ್ಷನ್‌ನಲ್ಲಿ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ.

‘ಮಹಿಳೆಯೊಬ್ಬರು ತನ್ನ ಮಗನೊಂದಿಗೆ ಪೂರ್ಣ ಗ್ರಾಮದಲ್ಲಿರುವ ಮಗಳ ಮನೆಗೆ ತೆರಳಿದ್ದರು. ಆಕೆಯ ಮನೆಯಲ್ಲಿ ಗಣೇಶ ಮೂರ್ತಿಯನ್ನು ಇರಿಸಲಾಗಿತ್ತು. ದೇವರ ದರ್ಶನ ಪಡೆದುದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಾಸು ಬರುತ್ತಿದ್ದಾಗ ರಸ್ತೆಯಲ್ಲಿದ್ದ ಗುಂಡಿಯಿಂದಾಗಿ ವಾಹನ ನಿಯಂತ್ರಣ ತಪ್ಪಿ ಬಿದ್ದಿದೆ. ರಸ್ತೆಯಲ್ಲಿ ಬಿದ್ದ ತಾಯಿ– ಮಗನ ಮೇಲೆ ಹಿಂದಿನಿಂದ ಬರುತ್ತಿದ್ದ ವಾಹನ ಸಾಗಿದೆ ’ ಎಂದು ಪೊಲೀಸರು ತಿಳಿಸಿದರು.

ಮೃತರನ್ನು ದೇವಿಕಾಬಾಯಿ ಬಲರಾಂ ಕಕಾಡೆ (48) ಮತ್ತು ನಿತಿನ್ (26) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.