ಪುಣೆ: ನಗರದ ಕೋರೆಗಾಂವ್ ಪಾರ್ಕ್ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಹಿಳೆಯು ಸ್ನೇಹಿತರೊಂದಿಗೆ ಹೋಟೆಲ್ಗೆ ರಾತ್ರಿ ಊಟಕ್ಕೆ ಹೋಗಿದ್ದರು. ಸ್ವಲ್ಪ ಸಮಯದ ಬಳಿಕ ಸ್ನೇಹಿತರು ಅಲ್ಲಿಂದ ಹೊರಟುಹೋಗಿದ್ದರು. ಆದರೆ, ಸಂತ್ರಸ್ತೆ ಟೇಬಲ್ ಬಳಿ ಒಬ್ಬರೇ ಉಳಿದಿದ್ದರು’ ಎಂದು ಪೊಲೀಸ್ ಕಮಿಷನರ್ ಮನೋಜ್ ಪಾಟೀಲ್ ಹೇಳಿದ್ದಾರೆ.

‘ಪಕ್ಕದ ಟೇಬಲ್ನಲ್ಲಿದ್ದ ಇಬ್ಬರು ವ್ಯಕ್ತಿಗಳು ಆಕೆಯ ಬಳಿ ಬಂದು ಮಾತನಾಡಲು ಆರಂಭಿಸಿದ್ದರು. ನಂತರ, ಅವರೆಲ್ಲರೂ ಕಾರಿನಲ್ಲಿ ಮತ್ತೊಂದು ಹೋಟೆಲ್ಗೆ ಹೋಗಲು ನಿರ್ಧರಿಸಿದ್ದರು. ಆದರೆ, ಹೋಗುವ ವೇಳೆ ಇಬ್ಬರು ವ್ಯಕ್ತಿಗಳು ನನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ’ ಎಂದು ಪಾಟೀಲ್ ತಿಳಿಸಿದ್ದಾರೆ.

ಕೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರು ಆಧರಿಸಿ ಮೂವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಮೇ 14ರಂದು ಕೆಲಸ ಮುಗಿಸಿ ನಡೆಯುತ್ತಾ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರನ್ನು ಎಳೆದುಕೊಂಡು, ಚಲಿಸುತ್ತಿದ್ದ ಬಸ್ನಲ್ಲಿಯೇ ಸರತಿಯಲ್ಲಿ ಚಾಲಕ ಹಾಗೂ ನಿರ್ವಾಹಕ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ದೆಹಲಿಯಲ್ಲಿ ನಡೆದಿತ್ತು.

ಜೋಧಪುರದಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಇಬ್ಬರು ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.

ತಾವು ಹಲವು ಬಾರಿ ನೀಡಿದ್ದ ದೂರುಗಳನ್ನು ಪೊಲೀಸರು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.