ಮುಂಬೈ: ಮಹಾರಾಷ್ಟ್ರದಲ್ಲಿ ಉಕ್ಕು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 22 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿರುವ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸಂಭವಿಸಿದೆ.
'ಈ ಪೈಕಿ ಮೂವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಛತ್ರಪತಿ ಸಂಭಾಜಿನಗರ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.
ಗಜ ಕೇಸರಿ ಸ್ಟೀಲ್ ಮಿಲ್‌ನಲ್ಲಿ ಇಂದು ಅಪರಾಹ್ನ ಬಾಯ್ಲರ್ ಸ್ಫೋಟ ಸಂಭವಿಸಿದೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 'ತಪ್ಪು ಕಂಡುಬಂದಲ್ಲಿ ಕಂಪನಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಕಾರ್ಮಿಕರ ಹೇಳಿಕೆ ದಾಖಲಿಸಲಾಗುತ್ತಿದೆ' ಎಂದು ಅವರು ಹೇಳಿದ್ದಾರೆ.