ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರೋಧ ಪಕ್ಷಗಳ ಸರ್ಕಾರಗಳನ್ನು ಉರುಳಿಸಿದ ಬಿಜೆಪಿ: ಕಪಿಲ್ ಸಿಬಲ್ ಆಕ್ರೋಶ

Published 4 ಜುಲೈ 2023, 4:54 IST
Last Updated 4 ಜುಲೈ 2023, 4:54 IST
ಅಕ್ಷರ ಗಾತ್ರ

ಮುಂಬೈ: ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ವಿರೋಧ ಪಕ್ಷಗಳ ಚುನಾಯಿತ ಸರ್ಕಾರಗಳನ್ನು ಬಿಜೆಪಿ ಉರುಳಿಸಿದೆ ಎಂದು ಕಾಂಗ್ರೆಸ್‌ ನಾಯಕ ಕಪಿಲ್ ಸಿಬಲ್ ಮಂಗಳವಾರ ಆರೋಪಿಸಿದ್ದಾರೆ.

ದೇಶದೆಲ್ಲೆಡೆ ವಿರೋಧ ಪಕ್ಷಗಳ ಸರ್ಕಾರಗಳನ್ನು ಬಿಜೆಪಿ ಬುಡಮೇಲುಗೊಳಿಸುತ್ತಿದ್ದು, ಈ ಕುರಿತು ಸುಪ್ರೀಂ ಕೋರ್ಟ್ ಗಮನ ಹರಿಸಬೇಕು ಎಂದೂ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಬಲ್, 2016ರಲ್ಲಿ ಉತ್ತರಾಖಂಡ ಹಾಗೂ ಅರುಣಾಚಲ ಪ್ರದೇಶ, 2019ರಲ್ಲಿ ಕರ್ನಾಟಕ, 2020ರಲ್ಲಿ ಮಧ್ಯಪ್ರದೇಶ ಮತ್ತು 2022ರಲ್ಲಿ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ವಿರೋಧ ಪಕ್ಷಗಳ ಚುನಾಯಿತ ಸರ್ಕಾರಗಳನ್ನು ಬಿಜೆಪಿ ಉರುಳಿಸಿದೆ.

ಕಾನೂನಿನಲ್ಲಿ ಇದಕ್ಕೆ ಅವಕಾಶವಿದೆಯೇ? ಈ ಕುರಿತು ಸುಪ್ರೀಂ ಕೋರ್ಟ್ ಗಮನಕ್ಕೆ! ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್‌ಸಿಪಿ ನಾಯಕ ಅಜಿತ್ ಪವಾರ್‌, ರಾಜಕೀಯ ಮಾರ್ಗದರ್ಶಕರೂ ಆಗಿದ್ದ ತಮ್ಮ ಚಿಕ್ಕಪ್ಪ, ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ತೊರೆದು, ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ–ಶಿವಸೇನಾ ಮೈತ್ರಿ ಸರ್ಕಾರಕ್ಕೆ ಸೇರ್ಪಡೆಯಾಗಿದ್ದರು.

ಏಕನಾಥ ಶಿಂದೆ ಅವರ ಸರ್ಕಾರದಲ್ಲಿ ಅಜಿತ್‌ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ವಿರುದ್ಧ ಸಿಬಲ್ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT