ಅಕೋಲಾ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊ ತೋರಿಸಿದ ಆರೋಪದ ಮೇಲೆ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕನನ್ನು ಬಂಧಿಸಲಾಗಿದೆ.

ಬಂಧಿತ ಶಿಕ್ಷಕ ಪ್ರಮೋದ್ ಸರ್ದಾರ್ ಎಂಬವರನ್ನು ಸೇವೆಯಿಂದ ವಜಾ ಮಾಡಲಾಗಿದೆ ಎಂದು ಜಿಲ್ಲಾ ಪರಿಷದ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಬಿ. ವೈಷ್ಣವಿ ಹೇಳಿದ್ದಾರೆ.

ಶಿಕ್ಷಕ ತಮಗೆ ಅಶ್ಲೀಲ ವಿಡಿಯೊ ತೋರಿಸಿದ್ದ ಬಗ್ಗೆ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಿದ್ದರು.

ಮುಂಬೈ ಸಮೀಪದ ಬದ್ಲಾಪುರದಲ್ಲಿ ನರ್ಸರಿಗೆ ಹೋಗುವ ಮೂರು ಹಾಗೂ ನಾಲ್ಕು ವರ್ಷದ ಬಾಲಕಿಯರ ಮೇಲೆ ಸ್ವಚ್ಛತಾ ಕಾರ್ಮಿಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆನ್ನಲ್ಲೇ, ಈ ಪ್ರಕರಣ ವರದಿಯಾಗಿದೆ.

ಮಂಗಳವಾರ ಬೆಳಿಗ್ಗೆ ಶಾಲೆಗೆ ಬಂದ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ವಿದ್ಯಾರ್ಥಿನಿಯರೊಂದಿಗೆ ಮಾತುಕತೆ ನಡೆಸಿದ್ದರು. ಬಳಿಕ ಶಿಕ್ಷಕನ ವಿರುದ್ಧ ಮಹಿಳೆಯರ ಮಾನಹಾನಿ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿದೆ.

ಶಿಕ್ಷಕ ತಮಗೆ ಕಳೆದ ನಾಲ್ಕು ತಿಂಗಳಿನಿಂದ ಇಂತಹ ವಿಡಿಯೊ ತೋರಿಸುತ್ತಿದ್ದ ಎಂದು ಆರು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಕೋಲಾ ಗ್ರಾಮಾಂತರ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
.ಬದ್ಲಾಪುರ | ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ವ್ಯಾಪಕ ಆಕ್ರೋಶ.ಬದ್ಲಾಪುರ ಪ್ರತಿಭಟನೆ ರಾಜಕೀಯ ಪ್ರೇರಿತ: ಪ್ರತಿಭಟಿಸಿದವರು ಹೊರಗಿನವರು; ಶಿಂದೆ ಗರಂ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.