ಬೆಂಗಳೂರು: ಹುಲಿಯೊಂದು ಒಂದೇ ಸಮಯದಲ್ಲಿ ದಾಳಿ ನಡೆಸಿ ನಾಲ್ವರು ಮಹಿಳೆಯರನ್ನು ಕೊಂದಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.

ತಡೋಬಾ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯದ ಸಿಂಧೇವಾಡಿ ತಾಲ್ಲೂಕಿನ ಗುಂಜೇವಾಹಿ–ಪಾಪನ್ಪುರ್ ಅರಣ್ಯ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ಗುರುವಾರ ನಡೆದಿದೆ.

ಗುಂಜೇವಾಹಿ ಗ್ರಾಮದ ಹತ್ತು ಮಹಿಳೆಯರು ಕಟ್ಟಿಗೆ ಸಂಗ್ರಹಿಸಲು ಅರಣ್ಯಕ್ಕೆ ತೆರಳಿದ್ದರು. ಈ ವೇಳೆ ಪೊದೆಯಲ್ಲಿ ಅಡಗಿದ್ದ ಹುಲಿ ದಾಳಿ ನಡೆಸಿದ್ದರಿಂದ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಏಕಕಾಲದಲ್ಲಿ ಮೃತರಾಗಿರುವುದು ಅಪರೂಪದ ಘಟನೆಯಾಗಿದೆ ಎಂದು ತಿಳಸಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ ಎಂದು ನ್ಯೂಸ್ 18 ಮರಾಠಿ ವೆಬ್ಸೈಟ್ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.