ನಾಗ್ಪುರ: ಠಾಣೆಯಲ್ಲಿ ಲೋಕಲ್ ರೈಲಿಂದ ಬಿದ್ದು ನಾಲ್ವರು ಮೃತಪಟ್ಟ ಘಟನೆಯ ಬಳಿಕ ಕೇಂದ್ರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದೆ.

ಮಹಾರಾಷ್ಟ್ರ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ‘ಮೃತರ ಕುಟುಂಬಕ್ಕೆ ಕೇಂದ್ರ ₹25 ಲಕ್ಷ ಪರಿಹಾರ ನೀಡಬೇಕು. ಈ ಅಪಘಾತಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಹೊಣೆ’ ಎಂದು ಆರೋಪಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಜನರಿಂದ ಕಿಕ್ಕಿರಿದು ತುಂಬಿದ್ದ ರೈಲು ಚಲಿಸುತ್ತಿದ್ದ ವೇಳೆ ಕೆಳಕ್ಕೆ ಬಿದ್ದು ಜಿಆರ್ಪಿ ಕಾನ್ಸ್ಟೆಬಲ್ ಸೇರಿ ನಾಲ್ವರು ಮೃತಪಟ್ಟು, ಆರು ಜನ ಗಾಯಗೊಂಡಿದ್ದರು.
.ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಕನಿಷ್ಠ ಐವರು ಪ್ರಯಾಣಿಕರು ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.