ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್-ಯುಜಿ ಅಕ್ರಮ: ಇಬ್ಬರು ಶಿಕ್ಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಎಟಿಎಸ್

Published 23 ಜೂನ್ 2024, 12:37 IST
Last Updated 23 ಜೂನ್ 2024, 12:37 IST
ಅಕ್ಷರ ಗಾತ್ರ

ಮುಂಬೈ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌–ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಲಾತೂರ್‌ ಜಿಲ್ಲೆಯಲ್ಲಿ ಖಾಸಗಿ ತರಬೇತಿ ಕೇಂದ್ರ ನಡೆಸುತ್ತಿದ್ದ ಇಬ್ಬರು ಶಿಕ್ಷಕರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ವಶಕ್ಕೆ ಪಡೆದು ವಿಚಾರಣೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನಿಖಾ ಸಂಸ್ಥೆಯ ನಾಂದೇಡ್‌ ಘಟಕವು ಶನಿವಾರ ರಾತ್ರಿ ಇಬ್ಬರನ್ನು ವಶಕ್ಕೆ ಪಡೆಯಿತು. ಕೆಲವು ಗಂಟೆಗಳ ವಿಚಾರಣೆಯ ಬಳಿಕ ಅವರನ್ನು ಬಿಟ್ಟುಕಳುಹಿಸಲಾಯಿತು. ಅಗತ್ಯವಿದ್ದರೆ ಮತ್ತೆ ಕರೆಸುವುದಾಗಿ ತಿಳಿಸಲಾಗಿದೆ. ಇಬ್ಬರು ಶಿಕ್ಷಕರಲ್ಲಿ ಒಬ್ಬರು ಲಾತೂರ್‌ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

‌ಸುಮಾರು 24 ಲಕ್ಷ ಅಭ್ಯರ್ಥಿಗಳು ನೀಟ್‌ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ಹಲವು ಅಕ್ರಮಗಳು ನಡೆದಿವೆ ಎಂಬ ಆರೋಪಗಳು ವ್ಯಕ್ತವಾಗಿದ್ದವು. ಇದನ್ನು ವಿರೋಧಿಸಿ ದೇಶದ ವಿವಿಧ ನಗರಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ಬಳಿಕ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯನ್ನು ಸಿಬಿಐಗೆ ವಹಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT