ಮುಂಬೈ : ಮಹಾರಾಷ್ಟ್ರದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ನಡೆಸುವ ಆಲೋಚನೆ ಇದ್ದರೆ, 2026ರ ಜನವರಿ ತಿಂಗಳವರೆಗೂ ಈ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

‘ಸುಪ್ರೀಂ ಕೋರ್ಟ್ 2025ರ ಮೇ 6ರಂದು ನೀಡಿದ ತೀರ್ಪಿನ ಪ್ರಕಾರ, ನಾಲ್ಕು ತಿಂಗಳ ಒಳಗಾಗಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆದೇಶ ನೀಡಿದೆ. ಸೂಕ್ತವಾದ ಪ್ರಕರಣದಲ್ಲಿ ಮಾತ್ರ ಅವಧಿ ವಿಸ್ತರಿಸಲು ಆಯೋಗಕ್ಕೆ ಅವಕಾಶ ನೀಡಿದೆ. ನ್ಯಾಯಾಲಯದ ಆದೇಶದಂತೆ ಸದ್ಯದಲ್ಲಿಯೇ ಚುನಾವಣೆ ನಡೆಸಬೇಕಿದ್ದು, ಚುನಾವಣಾ ಸಿಬ್ಬಂದಿ ಈ ಪ್ರಕ್ರಿಯೆಯಲ್ಲಿ ನಿರತರಾಗಿ
ದ್ದಾರೆ’ ಎಂದು ಸೆ.9ರಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

‘ರಾಜ್ಯದ 29 ಮಹಾನಗರ ಪಾಲಿಕೆಗಳು, 247 ನಗರಸಭೆಗಳು, 42 ನಗರ ಪಂಚಾಯತಿ, 147 ಪಟ್ಟಣ ಪಂಚಾಯತಿ, 32 ಜಿಲ್ಲಾ ಪಂಚಾಯತಿ ಸೇರಿದಂತೆ 336 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಹೀಗಾಗಿ, ಎಸ್ಐಆರ್ ಪ್ರಕ್ರಿಯೆ ಮುಂದೂಡಬೇಕು’ ಎಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಭೇಟಿ: ಮತದಾನ ಪ್ರಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮದ ಕುರಿತಂತೆ ವಿರೋಧ ಪಕ್ಷಗಳ ಮುಖಂಡರ ನಿಯೋಗವು ಮಹಾರಾಷ್ಟ್ರ ಮುಖ್ಯ ಚುನಾವಣಾ ಅಧಿಕಾರಿಯನ್ನು ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.