ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ರೈಲಿನಲ್ಲಿ ₹23.55 ಲಕ್ಷ ಚಿನ್ನಾಭರಣ ಕಳವು, ಪ್ರಕರಣ ದಾಖಲು

Last Updated 11 ಫೆಬ್ರವರಿ 2023, 5:30 IST
ಅಕ್ಷರ ಗಾತ್ರ

ಥಾಣೆ: ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಬ್ಯಾಗ್‌ನಲ್ಲಿದ್ದ ₹23.55 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನವಾಗಿತ್ತು. ಕಳ್ಳತನವಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್‌ನಿಂದ ವ್ಯಕ್ತಿಯೊಬ್ಬ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ದೂರುದಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

"ನಾವು ರೈಲು ನಿಲ್ದಾಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ದಾದರ್‌ನಲ್ಲಿ ವ್ಯಕ್ತಿಯೊಬ್ಬ ಬ್ಯಾಗ್‌ನೊಂದಿಗೆ ಇಳಿಯುತ್ತಿರುವುದು ಕಂಡುಬಂದಿತ್ತು. ನಾವು ಕಳ್ಳನನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತ್ತೆಹಚ್ಚಿ ಬ್ಯಾಗ್ ಅನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT