ಪುಣೆ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಭಾನುವಾರ ಎಸ್‌ಯುವಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಮೃತಪಟ್ಟಿದ್ದಾರೆ.

ಪಂಡರಾಪುರ-ಮೊಹೊಲ್ ಹೆದ್ದಾರಿಯಲ್ಲಿರುವ ಪೆನೂರ್ ಗ್ರಾಮದ ಬಳಿ ಭಾನುವಾರ ಸಂಜೆ 4.30ಕ್ಕೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಹೆದ್ದಾರಿಯ ಒಂದು ಬದಿಯಲ್ಲಿ ಕೆಲವು ಕಾಮಗಾರಿಗಳು ನಡೆಯುತ್ತಿವೆ. ಆ ಕಾರಣ ವಾಹನಗಳು ಒಂದು ಬದಿಯಲ್ಲಿ ಮಾತ್ರ ಸಂಚರಿಸುತ್ತಿವೆ. ಆ ಸ್ಥಳದಲ್ಲಿ ಮತ್ತೊಂದು ವಾಹನವನ್ನು ಹಿಂದಿಕ್ಕಲು ಎಸ್‌ಯುವಿ ಯತ್ನಿಸಿದೆ. ಆಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ’ ಎಂದು ಮೊಹೊಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಸಾಯಿಕರ್ ತಿಳಿಸಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಹತ್ತಿರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಎಸ್‌ಯುವಿಯಲ್ಲಿದ್ದವರಿಗೂ ಗಾಯಗಳಾಗಿದ್ದು, ಅವರನ್ನು ಪಂಡರಾಪುರ ಮತ್ತು ಮೊಹೊಲ್‌ನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.