ಹೈದರಾಬಾದ್: ತೆಲಂಗಾಣ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಬಿ. ಮಹೇಶ್ ಕುಮಾರ್ ಗೌಡ್ ಅವರು ಇಂದು (ಭಾನುವಾರ) ಅಧಿಕಾರ ವಹಿಸಿಕೊಂಡರು.
ನಗರದ ಕಾಂಗ್ರೆಸ್‌ನ ಪ್ರಧಾನ ಕಚೇರಿ ಗಾಂಧಿ ಭವನದಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷರಾಗಿ ಮಹೇಶ್ ಕುಮಾರ್ ಅಧಿಕಾರ ಸ್ವೀಕರಿಸುವ ವೇಳೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಸೇರಿದಂತೆ ಪಕ್ಷದ ನಾಯಕರು ಉಪಸ್ಥಿತಿರಿದ್ದರು.